Mysore
26
light rain
Light
Dark

ಲೋಕಸಮರ 2024: ತಾಯಿಯೊಂದಿಗೆ ಬಂದು ಮತದಾನ ಮಾಡಿ, ಬಳಿಕ ಸ್ಪಲ್ಫಿಗೆ ಪೋಸ್‌ ಕೊಟ್ಟ ರಾಗಾ!

ನವದೆಹಲಿ: ದೇಶಾದ್ಯಂತ ಇಂದು ಆರನೇ ಹಂತದ ಲೋಕಸಭಾ ಚುನಾವಣಾ ಮತದಾನ ನಡೆಯುತ್ತಿದೆ. ಈ ಹಂತದಲ್ಲಿ ದೆಹಲಿಯ ಎಲ್ಲಾ ಏಳು ಕ್ಷೇತ್ರಗಳಿಗೂ ಇಂದು ಒಂದೇ ಹಂತದಲ್ಲಿ ಚನಾವಣೆ ನಡಯಲಿದೆ.

ದೆಹಲಿಯಲ್ಲಿ ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಅವರ ಪುತ್ರ ರಾಹುಲ್‌ ಗಾಂಧಿ, ಪ್ರಿಯಾಂಗಾ ಗಾಂಧಿ ವಾದ್ರಾ ಅವರು ತಮ್ಮ ಮಕ್ಕಳ ಜತೆಯಾಗಿ ಬಂದು ಮತದಾನ ಮಾಡಿದ್ದಾರೆ.

ಮತದಾನ ಮಾಡಿದ ಬಳಿಕ ರಾಹುಲ್‌ ಗಾಂಧಿ ತಮ್ಮ ತಾಯಿ ಸೋನಿಯಾ ಅವರ ಜತೆ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದ್ದಾರೆ.

ಪ್ರತಿ ಬಾರಿಯೂ ಒಂದಲ್ಲಾ ಒಂದು ವಿಷಯಗಳನ್ನು ಪ್ರಸ್ತಾಪಪಿಸಿ ಜನರಿಗೆ ಹತ್ತಿರವಾಗುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಮತದಾನ ಮಾಡಿದ ಬಳಿಕವೂ ಜನರಿಗೆ ಮತದಾನದ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ.

ನಿಮ್ಮ ಪ್ರತಿ ಮತದಾನವು 30ಲಕ್ಷ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಇದು ಸಹಕಾರಿಯಾಲಿದೆ. ಮತ್ತು ಯುವಕರಿಗೆ ವರ್ಷಕ್ಕೆ ಒಂದು ಲಕ್ಷ ರೂ.ಗಳ ಮೊದಲ ಉದ್ಯೋಗ ಖಾತ್ರಿ ಯೋಜನೆಯನ್ನು ಪ್ರಾರಂಭಿಸುತ್ತದೆ ಎಂದು ಅವರು ಹೇಳಿದ್ದಾರೆ.

ಪ್ರಜಾಪ್ರಭುತ್ವದ ಹಬ್ಬದಲ್ಲಿ ನಾನು ಮತ್ತು ನನ್ನ ತಾಯಿ ಮತದಾನದ ಮೂಲಕ ಕೊಡುಗೆ ನೀಡಿದ್ದೇವೆ. ನೀವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಹೆಚ್ಚಿನ ಮತದಾನ ಮಾಡಿ, ನಿಮ್ಮ ಹಕ್ಕುಗಳಿಗಾಗಿ, ಕಟುಂಬಗಳ ಭವಿಷ್ಯಕ್ಕಾಗಿ ನಿಮ್ಮ ಮತ ಚಲಾಯಿಸಿ ಎಂದು ಮನವಿ ಮಾಡಿದರು.