BREAKING NEWS

ಏಪ್ರಿಲ್‌ 19ರಿಂದ ಜೂನ್‌ 1 ವರೆಗೆ ಒಟ್ಟು 7 ಹಂತದಲ್ಲಿ ಲೋಕಸಭಾ ಚುನಾವಣೆ: ಆಯುಕ್ತ ರಾಜೀವ್‌ ಕುಮಾರ್

ನವದೆಹಲಿ: ಚುನಾವಣಾ ಆಯಕ್ತ ರಾಜೀವ್‌ ಕುಮಾರ್‌ ಅವರು ಇಂದು (ಮಾ.೧೬) ಲೋಕಸಭಾ ಚುನಾವಣೆ ದಿನಾಂಕವನ್ನು ಪ್ರಕಟ ಮಾಡಿದ್ದಾರೆ.

ಇದೇ ಏಪ್ರಿಲ್‌ 19ರಿಂದ ಜೂನ್‌ 1 ವರೆಗೆ ಒಟ್ಟು 7 ಹಂತದಲ್ಲಿ ದೇಶಾದ್ಯಂತ ಚುನಾವಣೆ ನಡೆಯಲಿದೆ. ಕ್ರಮವಾಗಿ ಏಪ್ರಿಲ್‌ 19, ಏಪ್ರಿಲ್‌ 26, ಮೇ 7, ಮೇ 13, ಮೇ 20, ಮೇ 25 ಮತ್ತು ಜೂನ್‌ 1 ರಂದು ಒಟ್ಟು 10.5 ಲಕ್ಷ ಮತಗಟ್ಟೆಗಳಲ್ಲಿ 55 ಲಕ್ಷ ಮತ ಯಂತ್ರಗಳನ್ನು ಬಳಕೆ ಮಾಡಿಕೊಂಡು ಸುಮಾರು 1.50 ಕೋಟಿ ಚುನಾವಣಾ ಸಿಬ್ಬಂದಿಗಳ ನೇತೃತ್ವದಲ್ಲಿ ಈ ಬಾರಿಯ ಲೋಕಸಭಾ ಚನಾವಣೆ ನಡೆಯಲಿದೆ.

ಲೋಕಸಭಾ ಚುನಾವಣೆಯ ಫಲಿತಾಂಶ ಜೂನ್‌ 4 ರಂದು ಪ್ರಕಟವಾಗಲಿದೆ.

ಈ ಬಾರಿ ಒಟ್ಟು 96.8 ಕೋಟಿ ಜನರು ಮತದಾನ ಮಾಡಲಿದ್ದಾರೆ. ಅದರಲ್ಲಿ 2.18 ಲಕ್ಷ ಶತಾಯುಷಿಗಳು ಇದ್ದಾರೆ, 85 ವರ್ಷ ಮೇಲ್ಪಟ್ಟವರು 82 ಲಕ್ಷ ಮಂದಿ ಮತ್ತು ತೃತೀಯ ಲಿಂಗಿಗಳು 48 ಸಾವಿರ ಜನರು ಇದ್ದಾರೆ ಎಂದು ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಲೋಕಸಭಾ ಚುನಾವಣಾ ಮಾಹಿತಿ:

ಪುರುಷ ಮತದಾರರು: 49.70 ಕೋಟಿ
ಮಹಿಳಾ ಮತದಾರರು: 47.10 ಕೋಟಿ
ಶತಾಯುಷಿಗಳು: 2.18 ಲಕ್ಷ
ವಿಶೇಷ ಚೇತನರು: 88 ಲಕ್ಷ
ತೃತೀಯ ಲಿಂಗಿಗಳು: 48 ಸಾವಿರ
ಬಳಸಲಾದ ವಾಹನಗಳು: 4 ಲಕ್ಷ
ಚುನಾವಣಾ ಸಿಬ್ಬಂದಿಗಳು: ‌1.50 ಕೋಟಿ
ಮೊದಲ ಬಾರಿ ಮತದಾರರು: 1.80 ಕೋಟಿ
20-29 ವರ್ಷ ವಯಸ್ಕ ಮತದಾರರು: 19.74 ಕೋಟಿ

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

41 mins ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

43 mins ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

45 mins ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

54 mins ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

57 mins ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

1 hour ago