Light
Dark

ಲೋಕಸಮರ 2024: ವಾರಣಾಸಿಯಿಂದ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

ಉತ್ತರ ಪ್ರದೇಶ: ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಮಪತ್ರ ಸಲ್ಲಿಸಿದರು.

ಮಂಗಳವಾರ (ಮೇ.14) ಬೆಳಿಗ್ಗೆ ಕಾಲಭೈರವ ದೇವರ ದರ್ಶನ ಪಡೆದು ಬಳಿಕ ನಾಮಪತ್ರ ಸಲ್ಲಿಸಿದರು. ಇದಕ್ಕು ಮುನ್ನಾ ನಿನ್ನೆ ಪ್ರಧಾನಿ ಮೋದಿ ವಾರಣಾಸಿಯಲ್ಲಿ ಬೃಹತ್‌ ರೋಡ್‌ ಶೋ ನಡೆಸಿದರು. ಜತೆಗೆ ನಟಿ ಕಂಗನಾ ರಣಾವತ್‌ ಉತ್ತರಾಖಂಡದ ಮಂಡಿಯಿಂದ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಇದು ಕಂಗನಾರ ಮೊದಲ ಚುನಾವಣೆಯಾಗಿದೆ.

ಬಿಜೆಪಿಯ ಹಿರಿಯ ನಾಯಕರಾದ ರಾಜನಾಥ್‌ ಸಿಂಗ್‌, ಅಮಿತ್‌ ಶಾ, ಜೆಪಿ ನಡ್ಡಾ, ಏಕನಾಥ್‌ ಶಿಂಧೆ ಹಾಗೂ ನಿತೀಶ್‌ ಕುಮಾರ್‌ ಅವರು ಪ್ರಧಾನಿ ಮೋದಿ ಉಮೇದುವಾರಿಕೆ ಸಲ್ಲಿಸುವ ವೇಳೆ ಜತೆಯಲ್ಲಿದ್ದರು.