ತಿರುವಳ್ಳೂರು: ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿದೆ. ಎನ್‌ಡಿಎ 295 ಕ್ಷೇತ್ರಗಳಲ್ಲಿ ಹಾಗೂ ಇಂಡಿಯಾ ಮೈತ್ರಿಕೂಟ 230 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇತರರು 18 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ.
ತಮಿಳುನಾಡಿನ ತಿರುವಳ್ಳೂರು ಕ್ಷೇತ್ರದಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ, ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ಗೆಲುವಿನ ನಗೆ ಬೀರಿದ್ದಾರೆ. ಶಶಿಕಾಂತ್ ಸೆಂಥಿಲ್ ಬಿಜೆಪಿ ಬಾಲ ಗಣಪತಿ ವಿರುದ್ಧ 3 ಲಕ್ಷದ 74 ಸಾವಿರದ ಅಧಿಕ ಮತಗಳ ಅಂತರದಿಂದ ಭರ್ಜರಿ ಗೆಲುವು ಪಡೆದಿದ್ದಾರೆ.
ಬಿಜೆಪಿಯ ಬಾಲ ಗಣಪತಿ 151181 ಮತಗಳು ಹಾಗೂ ಡಿಎಂಡಿಕೆಯ ನಲ್ಲತಂಬಿ 148034 ಮತಗಳನ್ನು ಪಡೆದುಕೊಂಡಿದ್ದಾರೆ.