Mysore
28
broken clouds

Social Media

ಶನಿವಾರ, 18 ಏಪ್ರಿಲ 2026
Light
Dark

Loksabha Election Results 2024: ಕೇರಳದಲ್ಲಿ ಖಾತೆ ತೆರೆದ ಬಿಜೆಪಿ

ತ್ರಿಶೂರ್(ಕೇರಳ): ನಟ, ಬಿಜೆಪಿ ಅಭ್ಯರ್ಥಿ ಸುರೇಶ್‌ ಗೋಪಿ ಅವರು ಕೇರಳದ ತ್ರಿಶೂರ್‌ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ಕೇರಳದಲ್ಲಿ ಖಾತೆ ತೆರೆಯುವ ತನ್ನ ಕನಸನ್ನು ನನಸು ಮಾಡಿಕೊಂಡಿದೆ.

ಇದೇ ಮೊದಲ ಬಾರಿಗೆ ಬಿಜೆಪಿ ಇಲ್ಲಿ ಖಾತೆ ತೆರೆದಿದ್ದು, ಕಾಂಗ್ರೆಸ್‌ನ ಕೆ.ಮುರಳೀಧರನ್‌ ಮತ್ತು ಸಿಪಿಐಯ ವಿ.ಎಸ್‌ ಸುನೀಲ್‌ ಕುಮಾರ್‌ ಅವರನ್ನು ಸೋಲಿಸುವ ಮೂಲಕ ಬಿಜೆಪಿ ಅಭ್ಯರ್ಥಿ ಸುರೇಶ್‌ ಗೋಪಿ ಅವರು ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಸುರೇಶ್‌ ಗೋಪಿ ಅವರು 69 ಸಾವಿರ ಅಂತರಗಳ ಮತ ಪಡೆದು ಗೆಲುವು ಸಾಧಿಸಿದ್ದಾರೆ. ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಸುರೇಶ್‌ ಗೋಪಿ ಉತ್ತಮ ಪ್ರದರ್ಶನ ತೋರಿದ್ದರು.

Tags:
error: Content is protected !!