ಮಂಡ್ಯ: ಮಂಡ್ಯ ಕ್ಷೇತ್ರ ಗೆದ್ದು ಬೀಗುತ್ತಿರುವ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಹಾಸನ ಜೆಡಿಎಸ್ ಸೋಲಿಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ ಅವರು, ಹಾಸನದ ಸೋಲು ಬಹಳ ಆಘಾತ ತಂದಿದೆ. ಹಾಸನದಲ್ಲಿ ಈ ಫಲಿತಾಂಶ ನಿರೀಕ್ಷಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಬಿಜೆಪಿ-ಜೆಡಿಎಸ್ ಮೈತ್ರಿ ಕೂಟ ಇನ್ನು ನಾಲ್ಕೈದು ಸ್ಥಾನ ಗೆಲ್ಲಬಹುದಿತ್ತು. ನಮ್ಮ ತಪ್ಪಿನಿಂದ ನಾವು ಕೆಲವು ಕ್ಷೇತ್ರಗಳನ್ನು ಕಳೆದುಕೊಂಡಿದ್ದೇವೆ ಎಂದು ಹೇಳಿದರು.
ಕಳೆದ ಬಾರಿಯ ಲೋಕಸಭಾ ಚುನಾವಣೆಯ ಹೈವೊಲ್ಟೆಜ್ ಕಣವಾಗಿದ್ದ ಮಂಡ್ಯದಲ್ಲಿ ಸುಮಲತಾ ವಿರುದ್ಧ ಎಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಹೀನಾಯ ಸೋಲು ಕಂಡಿದ್ದರು. ಇದೀಗ ಎಚ್.ಡಿ ಕುಮಾರಸ್ವಾಮಿ ಮಂಡ್ಯದಿಂದ ಗೆದ್ದು ಕಾಂಗ್ರೆಸ್ ನಾಯಕರಿಗೆ ಶಾಕ್ ಕೊಟ್ಟಿದ್ದಾರೆ.