BREAKING NEWS

Loksabha Election Results 2024: ಚಾಮರಾಜನಗರ ಕ್ಷೇತ್ರದಲ್ಲಿ ಸುನಿಲ್ ಬೋಸ್‌ಗೆ ಗೆಲುವು

ಚಾಮರಾಜನಗರ: ಮೀಸಲು ಲೋಕಸಭಾ ಕ್ಷೇತ್ರ ಚಾಮರಾಜನಗರದಲ್ಲಿ ಮತ ಎಣಿಕೆಯ ಆರಂಭಿಕ ಹಂತದಿಂದಲೂ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಮುನ್ನಡೆ ಸಾಧಿಸಿದ್ದು, ಬಹುತೇಕ ಸುನೀಲ್‌ ಬೋಸ್‌ ಗೆಲುವಿನ ನಗೆ ಬೀರಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್ 12 ನೇ ಸುತ್ತಿನಲ್ಲೂ ಮುನ್ನಡೆ ಸಾಧಿಸಿದ್ದು, 1:30 ರ ವೇಳೆಗೆ 726229 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಬಾಲರಾಜು ಎಸ್‌ ಇದೇ ಸಮಯಕ್ಕೆ 541885 ಮತ ಪಡೆದು ಹಿನ್ನಡೆ ಸಾಧಿಸುವ ಮೂಲಕ ಸೋಲು ಕಂಡಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್ 1,84,344 ಮತಗಳ ಮುನ್ನಡೆ ಸಾಧಿಸಿ ಗೆಲುವಿನತ್ತ ದಾಪುಗಾಲು ಇಟ್ಟಿದ್ದಾರೆ.

ಬಿಎಸ್‌ಪಿ ಅಭ್ಯರ್ಥಿ ಕೃಷ್ಣಮೂರ್ತಿ  15560 ಮತ ಪಡೆದಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

14 mins ago

ಪೋಕ್ಸೋ ಕಾಯಿದೆ ದುರ್ಬಳಕೆ, ಚಿತಾವಣೆ ಪೋಕ್ಸೋ ಅಪರಾಧಕ್ಕೆ ಸಮ!

ಸ್ಟ್ಯಾನ್ಲಿ, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಮಕ್ಕಳಿಗೆ ನೈತಿಕ ಪಾಠ ಮಾಡಬೇಕಾದ ಶಿಕ್ಷಕರು ಸೇರಿಕೊಂಡು ಮಕ್ಕಳಿಗೆ ಪ್ರಚೋದನೆ ನೀಡಿ ತಮ್ಮ…

18 mins ago

ರಾಜಕೀಯ ಧ್ರುವೀಕರಣಕ್ಕೆ ಈಗ ಸಿಗುತ್ತಿದೆ ವೇಗ

ರಾಜ್ಯ ರಾಜಕಾರಣ ಕುತೂಹಲಕಾರಿ ತಿರುವು ಪಡೆಯುತ್ತಿದೆ. ನಾಲ್ಕು ತಿಂಗಳ ಹಿಂದೆ ಸಿದ್ದರಾಮಯ್ಯ ಸಿಎಂ ಹುದ್ದೆಯಿಂದ ಕೆಳಗಿಳಿದಿದ್ದೇ ಇದಕ್ಕೆ ಕಾರಣ. ಅಂದ…

25 mins ago

ಮಳೆಯಿಲ್ಲದೇ ಒಣಗುತ್ತಿದೆ ನಾಟಿ ಮಾಡಿದ ಪೈರು

ಲಕ್ಷ್ಮೀಕಾಂತ್ ಕೊಮಾರಪ್ಪ ವಾಡಿಕೆಯಂತೆ ಸುರಿಯದ ಮಳೆ; ಆತಂಕಗೊಂಡಿರುವ ರೈತರು ಸೋಮವಾರಪೇಟೆ: ಮಳೆ ಕೈಕೊಟ್ಟ ಪರಿಣಾಮ ಭತ್ತದ ಬೆಳೆಗೆ ನೀರಿನ ಕೊರತೆ…

31 mins ago

ಹೆದ್ದಾರಿ ಅಗಲೀಕರಣ ಕಾಮಗಾರಿ; ಸವಾರರಿಗೆ ದೂಳಿನ ಕಿರಿಕಿರಿ

ಮಹೇಂದ್ರ ಹಸಗೂಲಿ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಮೈಸೂರು- ಗುಂಡ್ಲುಪೇಟೆ-ಊಟಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಮಂದಗತಿಯಲ್ಲಿ…

37 mins ago

ಪಾಳು ಕೊಂಪೆಯಂತಾದ ಕರ್ಜನ್ ಪಾರ್ಕ್!

ದಿನೇಶ್ ಕುಮಾರ್ ಎಚ್.ಎಸ್. ಅಶುಚಿತ್ವ ಮರೆಮಾಚಲು ಹಗಲು ಹೊತ್ತಿನಲ್ಲಿಯೇ ಪಾರ್ಕ್ ಬಂದ್; ಸಾರ್ವಜನಿಕರ ಆಕ್ರೋಶ ಮತ್ತೊಂದೆಡೆ ನಳನಳಿಸುತ್ತಿದೆ ಜಿಲ್ಲಾ ಪಂಚಾಯಿತಿ…

41 mins ago