ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಗೆ ಅಖಾಡ ಫಿಕ್ಸ್ ಆಗಿದ್ದು, ದೇಶಾದ್ಯಂತ ಏಪ್ರಿಲ್19 ರಿಂದ ಜೂನ್ 1 ವರೆಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ.
ಹಾಗೆಯೇ ರಾಜ್ಯದಲ್ಲಿ ಒಟ್ಟು 2 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತ ಏಪ್ರಿಲ್ 26 ಮತ್ತು ಎರಡನೇ ಹಂತ ಮೇ 7 ರಂದು ಒಟ್ಟು 28 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿಯೇ ಚುನಾವಣೆ ನಡೆಯಲಿದೆ. ಏಪ್ರಿಲ್ 26 ರಂದು ಮೈಸೂರು ಸೇರಿದಂತೆ ಒಟ್ಟು 14 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತದೆ.
ಏಪ್ರಿಲ್ 26ರಂದು ಚುನಾವಣೆ ನಡೆಯುವ ಕ್ಷೇತ್ರಗಳು: ಮೈಸೂರು, ಮಂಡ್ಯ, ಚಾಮರಾಜನಗರ, ಚಿತ್ರದುರ್ಗ, ಉಡುಪಿ – ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಸೆಂಟ್ರಲ್ ಕೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ ಚುನಾವಣೆ ನಡೆಯುವ ಕ್ಷೇತ್ರಗಳು: ರಾಯಚೂರು, ಕಲಬುರಗಿ, ಬೀದರ್, ಬಾಗಲಕೋಟೆ, ವಿಜಯಪುರ, ಶಿವಮೊಗ್ಗ, ಬಳ್ಳಾರಿ, ದಾವಣಗೆರೆ, ಹಾವೇರಿ, ಉತ್ತರ ಕನ್ನಡ, ಚಿಕ್ಕೋಡಿ, ಕೊಪ್ಪಳ, ಬೆಳಗಾವಿ ಮತ್ತು ಧಾರವಾಡ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಈ ಬಾರಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ರಾಜ ವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಣಕ್ಕಿಳಿದಿದ್ದಾರೆ. ಕಳೆದ ಬಾರಿಯ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಸಿಗಲಿದೆ ಎಂದು ಊಹಿಸಲಾಗಿತ್ತು, ಆದರೆ ಕೊನೆಯ ಕ್ಷಣದಲ್ಲಿ ಎಲ್ಲಾ ಲೆಕ್ಕಾಚಾರವು ಬದಲಾಗಿ ಒಡೆಯರ್ ಪಾಲಿಗೆ ಟಿಕೆಟ್ ದಕ್ಕಿತು.
ಮೈಸೂರು: ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕೌಂಟ್‌ಡೌನ್ ಶುರುವಾಗಿದ್ದು, ನ್ಯೂ ಇಯರ್ ಆಚರಿಸಲು ಪ್ರವಾಸಿಗರು ಮೈಸೂರಿಗೆ ಲಗ್ಗೆಯಿಟ್ಟಿದ್ದಾರೆ. ಜಗತ್ಪ್ರಸಿದ್ಧ ಮೈಸೂರು ಅರಮನೆಗೆ…
ಬಳ್ಳಾರಿ: ವಾಲ್ಮೀಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತನಿಗೆ ಸಿಬಿಐ ಶಾಕ್ ನೀಡಿದ್ದು, ಬಳ್ಳಾರಿಯಲ್ಲಿ ವಿಶ್ವನಾಥ್…
ಬೆಂಗಳೂರು: ಪೈರಸಿ ವಿರುದ್ಧ ನವರಸ ನಾಯಕ ಜಗ್ಗೇಶ್ ಸಮರ ಸಾರಿದ್ದು, ಕೋಣ ಸಿನಿಯಾ ಪೈರಸಿ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಹೊಸ ವರ್ಷ ಆಚರಣೆಗೆ ಸರ್ವ ರೀತಿಯಲ್ಲೂ ಸಜ್ಜಾಗಿದ್ದು, ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಪ್ರಮುಖವಾಗಿ…
ಕೇರಳ(ತಿರುವನಂತಪುರ): ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ…
ಮೈಸೂರು: ದೇಶದೊಳಗೆ ಅಕ್ರಮವಾಗಿ ನುಸುಳುವವರ ಸಂಖ್ಯೆ ಹೆಚ್ಚಾಗಿದ್ದು, ಕರ್ನಾಟಕದಲ್ಲಿಯೂ ಬಾಂಗ್ಲಾದೇಶದ ಪ್ರಜೆಗಳು ಉದ್ಧಟತನ ತೋರುತ್ತಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ…