ಬಿಜೆಪಿ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಅನ್ನು ಡಾ.ಕೆ. ಸುಧಾಕರ್ ಅವರಿಗೆ ನೀಡಲಾಗಿದ್ದು, ಉತ್ತರ ಕನ್ನಡ ಕ್ಷೇತ್ರದ ಟಿಕೆಟ್ ಅನ್ನು ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ನೀಡಿದೆ, ರಾಯಚೂರು ಕ್ಷೇತ್ರದ ಟಿಕೆಟ್ ಅನ್ನು ರಾಜಾ ಅಮರೇಶ್ವರ ನಾಯಕ್ ಅವರಿಗೆ ಘೋಷಿಸಿದೆ ಮತ್ತು ಬೆಳಗಾವಿ ಕ್ಷೇತ್ರದ ಟಿಕೆಟ್ ಅನ್ನು ಜಗದೀಶ್ ಶೆಟ್ಟರ್ ಅವರಿಗೆ ನೀಡಲಾಗಿದೆ. ಇನ್ನು ಚಿತ್ರದುರ್ಗ ಕ್ಷೇತ್ರದ ಟಿಕೆಟ್ ಘೋಷಣೆ ಬಿಜೆಪಿಗೆ ಇನ್ನೂ ಕಗ್ಗಂಟಾಗಿ ಪರಿಣಮಿಸಿದೆ. ಈ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಇನ್ನೂ ಘೋಷಿಸಬೇಕಿದೆ.
Loksabha Elections 2024: ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ




