ಮಂಡ್ಯ: ಇಂದು ( ಜೂನ್ 4 ) ದೇಶಾದ್ಯಂತ ಲೋಕಸಭೆ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಎನ್‌ಡಿಎ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆದುಕೊಳ್ಳುವತ್ತ ಹೆಜ್ಜೆ ಇಟ್ಟಿದೆ.
ಇತ್ತ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ ಕಾಂಗ್ರೆಸ್‌ನ ವೆಂಕಟರಮಣೇಗೌಡ ವಿರುದ್ಧ ಬೃಹತ್ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಮತ ಎಣಿಕೆಯ ಆರಂಭದಿಂದಲೂ ಮುನ್ನಡೆಯನ್ನು ಸಾಧಿಸುತ್ತಿರುವ ಹೆಚ್‌ಡಿ ಕುಮಾರಸ್ವಾಮಿ ಹತ್ತನೇ ಸುತ್ತಿನ ನಂತರವೂ ಸಹ ಮುನ್ನಡೆಯನ್ನು ಸಾಧಿಸಿದ್ದಾರೆ.
ಬೆಳಗ್ಗೆ 11.35ರ ಸಮಯಕ್ಕೆ ಕುಮಾರಸ್ವಾಮಿ 1,76,067 ಮತಗಳ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಈ ಸಮಯಕ್ಕೆ ಕುಮಾರಸ್ವಾಮಿ 4,65,777 ಮತಗಳನ್ನು ಪಡೆದುಕೊಂಡಿದ್ದರೆ, ಎದುರಾಳಿ ವೆಂಕಟರಮಣೇಗೌಡ 2,89,710 ಮತಗಳನ್ನು ಪಡೆದುಕೊಂಡಿದ್ದಾರೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…