BREAKING NEWS

ಮಧ್ಯಪ್ರದೇಶ-ಛತ್ತೀಸ್‌ಗಢ ವಿಧಾನಸಭಾ ಚುನಾವಣೆ: ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ!

ನವದೆಹಲಿ: ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಈ ವರ್ಷ ಎರಡೂ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಇದಕ್ಕಾಗಿ ಪಕ್ಷ ಸಿದ್ಧತೆಯಲ್ಲಿ ತೊಡಗಿದೆ.

ಗುರುವಾರ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಪಕ್ಷವು ಮಧ್ಯಪ್ರದೇಶದಲ್ಲಿ 39 ಮತ್ತು ಛತ್ತೀಸ್‌ಗಢದಲ್ಲಿ 21 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ವಾಸ್ತವವಾಗಿ, ಎರಡೂ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸಭೆ ಬುಧವಾರ ನಡೆಯಿತು.

ಈ ಸಭೆಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಸೇರಿದಂತೆ ಎಲ್ಲಾ ನಾಯಕರು ಭಾಗವಹಿಸಿದ್ದರು. ಉಭಯ ರಾಜ್ಯಗಳ ಚುನಾವಣೆಯ ಹೊರತಾಗಿ ಹಲವು ವಿಷಯಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ. ಇದಾದ ನಂತರವೇ ಮೊದಲು ರಾಜಸ್ಥಾನದಲ್ಲಿ ಬಿಜೆಪಿಯ ಚುನಾವಣಾ ತಂಡವನ್ನು ಘೋಷಿಸಲಾಯಿತು. ನಂತರ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

2018ರಲ್ಲಿ ನಡೆದ ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲನ್ನು ಎದುರಿಸಬೇಕಾಯಿತು. ರಾಜ್ಯದ ಒಟ್ಟು 90 ವಿಧಾನಸಭಾ ಸ್ಥಾನಗಳ ಪೈಕಿ ಬಿಜೆಪಿ 15 ಸ್ಥಾನಗಳನ್ನು ಮಾತ್ರ ಗೆದ್ದಿತ್ತು. ಅದೇ ಸಮಯದಲ್ಲಿ, ಕಾಂಗ್ರೆಸ್ ಗರಿಷ್ಠ 68 ವಿಧಾನಸಭಾ ಸ್ಥಾನಗಳನ್ನು ಗೆದ್ದು ಸರ್ಕಾರವನ್ನು ರಚಿಸಿತು. ಇದೀಗ ಬಿಜೆಪಿ ಹಲವು ವಿಚಾರಗಳ ತಯಾರಿಯಲ್ಲಿ ನಿರತವಾಗಿದ್ದು, ತಾನು ಸೋತ ಸ್ಥಾನಗಳಿಗೆ ಕಾರಣ ಹುಡುಕುತ್ತಾ, ಮುಂದೆ ರಣತಂತ್ರ ರೂಪಿಸುತ್ತಿದೆ.

2018ರ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 114 ಸ್ಥಾನಗಳನ್ನು ಪಡೆದುಕೊಂಡಿತು. 230 ಸದಸ್ಯರ ವಿಧಾನಸಭೆಯಲ್ಲಿ ಬಹುಮತಕ್ಕೆ ಎರಡು ಸ್ಥಾನ ಕೊರತೆಯಿತ್ತು. ಇನ್ನು ಬಿಜೆಪಿ 109 ಸ್ಥಾನಗಳು ಪಡೆದಿತ್ತು. ಬಿಎಸ್‌ಪಿ ಎರಡು ಸ್ಥಾನ ಪಡೆದರೆ ಇತರರಿಗೆ ಐದು ಸ್ಥಾನಗಳು ಲಭಿಸಿತ್ತು. ನಂತರ ಬಿಎಸ್‌ಪಿ, ಎಸ್‌ಪಿ ಮತ್ತು ಇತರರ ಬೆಂಬಲದೊಂದಿಗೆ ಕಾಂಗ್ರೆಸ್ ಸರ್ಕಾರ ರಚಿಸಿತು.

15 ವರ್ಷಗಳ ನಂತರ ರಾಜ್ಯದಲ್ಲಿ ಅಧಿಕಾರವನ್ನು ಪಡೆದುಕೊಂಡಿತು. ಕಮಲ್ ನಾಥ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್ ಸರ್ಕಾರ ಡಿಸೆಂಬರ್ 2018ರಿಂದ ಮಾರ್ಚ್ 2020ರವರೆಗೆ ನಡೆಯಿತು. ಆದರೆ 15 ತಿಂಗಳ ಅಂತ್ಯದ ವೇಳೆಗೆ, ಕಮಲ್ ನಾಥ್ ಸರ್ಕಾರದ ಪತನ ನಿರ್ಧಾರವಾಯಿತು. ಅನೇಕ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡರು. ಹೀಗಾಗಿ ಬಿಜೆಪಿ ಸರ್ಕಾರ ನಡೆದಿದ್ದು ಶಿವರಾಜ್ ಮುಖ್ಯಮಂತ್ರಿಯಾದರು.

andolanait

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

1 hour ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

1 hour ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

2 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago