BREAKING NEWS

ಮಧ್ಯಪ್ರದೇಶ: ದಲಿತ ಯುವಕರಿಗೆ ಮಲ ತಿನ್ನಿಸಿ ಹೀನ ಕೃತ್ಯ: 7 ಮಂದಿ ಬಂಧನ

ಭೂಪಾಲ್: ಕೆಳ ಜಾತಿಯ ಇಬ್ಬರು ಯುವಕರ ಮೇಲೆ ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪ ಹೊರಿಸಿ ಬಲವಂತವಾಗಿ ಮಲ ತಿನ್ನಿಸಿದ ಹೀನ ಕೃತ್ಯ ಎಸಗಿರುವ ಘಟನೆ ಮಧ್ಯಪ್ರದೇಶ ಶಿವಪುರಿಯಲ್ಲಿ ನಡೆದಿರುವುದಾಗಿ ಶುಕ್ರವಾರ (ಜುಲೈ 7) ವರದಿಯಾಗಿದೆ.

ಕಳೆದ ಜೂನ್ 30 ರಂದು ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ವರ್ಖಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಇದರ ವಿಡಿಯೋ ವೈರಲ್ ಆದ ಬೆನ್ನಲ್ಲೇ ಈ ಘಟನೆ ಬೆಳಕಿಗೆ ಬಂದಿದೆ. 23 ಮತ್ತು 24 ವರ್ಷದ ಇಬ್ಬರು ಯುವಕರ ಮೇಲೆ ಈ ಅಮಾನವೀಯ ಕೃತ್ಯ ಎಸಗಲಾಗಿದ್ದು, ಕೃತ್ಯಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಏಳು ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಹೇಳಲಾಗಿದೆ.

ಮಧ್ಯಪ್ರದೇ‍ಶ ಸ್ಥಳೀಯ ಪೊಲೀಸರ ತನಿಖೆಯ ನಂತರ ಯುವಕರ ಮೇಲಿರುವ ಲೈಂಗಿಕ ದೌರ್ಜನ್ಯದ ಆರೋಪಗಳು ಆಧಾರ ರಹಿತವೆಂದು ದೃಢಪಡಿಸಿವೆ. ಆಸ್ತಿ ಸಂಬಂಧಿತ ವಿವಾದಕ್ಕೆ ಆರೋಪಿಗಳು ಹೀಗೆ ಮಾಡಿದ್ದಾರೆ ಎಂಬುದು ತಿಳಿದು ಬಂದಿದೆ. ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಘಟನೆಯನ್ನು ಖಂಡಿಸಿದ್ದಾರೆ.

ಆರೋಪಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯಿದೆ (ಎನ್ಎಸ್ಎ) ಅಡಿ ಪ್ರಕರಣ ದಾಖಲಿಸಲು ಮತ್ತು ಅವರು ಅಕ್ರಮವಾಗಿ ನಿರ್ಮಿಸಿದ ಆಸ್ತಿಗಳನ್ನು ಕೆಡವಲು ಶಿವಪುರಿ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಲಾಗಿದೆ” ಎಂದು ಅವರು ಹೇಳಿದರು. ಮಧ್ಯಪ್ರದೇಶ ಬುಡಕಟ್ಟು ಸಮುದಾಯದ ವ್ಯಕ್ತಿಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ಬೆನ್ನಲ್ಲೇ ಮಲ ತಿನ್ನಿಸಿದ ಘಟನೆ ವರದಿಯಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಾದ ಅಜ್ಮತ್ ಖಾನ್, ವಕೀಲ್ ಖಾನ್, ಆರಿಫ್ ಖಾನ್, ಶಾಹಿದ್ ಖಾನ್, ಇಸ್ಲಾಂ ಖಾನ್, ರಹೀಶಾ ಬಾನೋ ಮತ್ತು ಸೈನಾ ಬಾನೊ ಎಂಬ ಕಿರಾತಕರನ್ನು ಗುರುವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಜೈಲಿಗೆ ಕಳುಹಿಸಿದ್ದಾರೆ. ಇನ್ನೊಂದೆಡೆ ಅರಣ್ಯ, ಪೊಲೀಸ್ ಮತ್ತು ಜಿಲ್ಲಾಡಳಿತದ ಜಂಟಿ ತಂಡವು ಅರಣ್ಯ ಭೂಮಿಯಲ್ಲಿ ಮನೆ ನಿರ್ಮಿಸಲಾಗಿದೆ ಎಂಬ ಕಾರಣಕ್ಕಾಗಿ ಆರೋಪಿಗಳ ಕುಟುಂಬದ ಮೂರು ಮನೆಗಳನ್ನು ಭಾಗಶಃ ನೆಲಸಮಗೊಳಿಸಿದೆ.

andolanait

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

8 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

8 hours ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

9 hours ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

9 hours ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

9 hours ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

9 hours ago