ಇಂದೋರ್: ಹಿರಿಯ ಪತ್ರಕರ್ತ ಮತ್ತು ಪದ್ಮಶ್ರೀ ಪುರಸ್ಕೃತ ಅಭಯ್ ಛಜಲಾನಿ ಅವರು ದೀರ್ಘಕಾಲದ ಅನಾರೋಗ್ಯದಿಂದ ಗುರುವಾರ ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಆಪ್ತ ಮೂಲಗಳು ತಿಳಿಸಿವೆ. 88 ವರ್ಷದ ಛಜಲಾನಿ ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಹಿರಿಯ ಪತ್ರಕರ್ತ ಛಜಲಾನಿ ಬಹಳ ದಿನಗಳಿಂದ ಅಸ್ವಸ್ಥರಾಗಿದ್ದು, ಕಳೆದ ಎರಡು ತಿಂಗಳಿಂದ ಹಾಸಿಗೆ ಹಿಡಿದಿದ್ದರು. ಅವರು ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.
ಹಿಂದಿ ದಿನಪತ್ರಿಕೆ ನಯೀದುನಿಯಾದ ಸಂಪಾದಕೀಯ ಮಂಡಳಿಯ ಅಧ್ಯಕ್ಷರಾಗಿದ್ದ ಛಜಲಾನಿ ಅವರು ಪತ್ರಿಕೋದ್ಯಮಕ್ಕೆ ನೀಡಿದ ಕೊಡುಗೆಗಾಗಿ 2009 ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಭಾಜನರಾಗಿದ್ದರು. ಅವರು ಇಂಡಿಯನ್ ಲ್ಯಾಂಗ್ವೇಜ್ ನ್ಯೂಸ್ ಪೇಪರ್ ಅಸೋಸಿಯೇಷನ್ (ILNA) ಮತ್ತು ಇಂಡಿಯನ್ ನ್ಯೂಸ್ ಪೇಪರ್ ಸೊಸೈಟಿ (INS) ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…