BREAKING NEWS

ಮಹಾರಾಷ್ಟ್ರ: ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್​ರನ್ನು ಭೇಟಿಯಾದ ಅಜಿತ್ ಪವಾರ್

ಮುಂಬೈ: ಮಹತ್ವದ ಬೆಳವಣಿಗೆಯೊಂದರಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಭಾನುವಾರ ಮುಂಬೈನ ವೈಬಿ ಚವಾಣ್ ಸೆಂಟರ್‌ನಲ್ಲಿ ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಅವರನ್ನು ಭೇಟಿಯಾದರು. ಪ್ರಫುಲ್ ಪಟೇಲ್, ಛಗನ್ ಭುಜಬಲ್ ಹಾಗೂ ಎನ್​ಸಿಪಿಯ ಕೆಲವು ಸಚಿವರು ಉಪಸ್ಥಿತರಿದ್ದರು.

ಜುಲೈ 2 ರಂದು ತನ್ನ ಪವಾರ್ ವಿರುದ್ಧ ಬಂಡಾಯವೆದಿದ್ದ ಅಜಿತ್ ಪವಾರ್, ಬೆಂಬಲಿಗ ಶಾಸಕರೊಂದಿಗೆ ಬಿಜೆಪಿ ಬೆಂಬಲಿತ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಭಾಗವಾಗಿದ್ದರು. ಆ ನಂತರ ಇದೇ ಮೊದಲ ಬಾರಿ ಎನ್​ಸಿಪಿ ಅಧ್ಯಕ್ಷರನ್ನು ಭೇಟಿಯಾಗಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯ ಮುಂಗಾರು ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮೊದಲು ಈ ಸಭೆ ನಡೆದಿದೆ.

ಎಲ್ಲರೂ ಶರದ್ ಪವಾರ್ ಅವರ ಆಶೀರ್ವಾದ ಪಡೆಯಲು ಬಂದಿದ್ದಾರೆ ಎಂದು ಪ್ರಫುಲ್ ಪಟೇಲ್ ಪ್ರತಿಕ್ರಿಯಿಸಿದ್ದಾರೆ. ಭೇಟಿ ವೇಳೆ, ಅವರು (ಶರದ್ ಪವಾರ್) ಎನ್‌ಸಿಪಿಯಲ್ಲಿ ಒಗ್ಗಟ್ಟು ಕಾಯ್ದುಕೊಳ್ಳುವಂತೆ ನೋಡಿಕೊಳ್ಳಲು ಪವಾರ್ ಬಳಿ ಕೇಳಿಕೊಂಡರು. ಆದರೆ, ಇದಕ್ಕೆ ಶರದ್ ಪವಾರ್ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎಂದು ಅವರು ಹೇಳಿದರು.

ಸಭೆಯಲ್ಲಿ ಎನ್‌ಸಿಪಿ ಸಚಿವರಾದ ಹಸನ್ ಮುಶ್ರಿಫ್, ಅದಿತಿ ತಟ್ಕರೆ ಮತ್ತು ದಿಲೀಪ್ ವಾಲ್ಸೆ ಪಾಟೀಲ್ ಕೂಡ ಭಾಗವಹಿಸಿದ್ದರು.

ಶರದ್ ಪವಾರ್ ಶಿಬಿರದ ಮೂಲಗಳ ಪ್ರಕಾರ, ಎನ್‌ಸಿಪಿ ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್ ಮತ್ತು ಪಕ್ಷದ ನಾಯಕ ಜಿತೇಂದ್ರ ಅವ್ಹಾದ್ ಕೂಡ ಸಂಭಾಷಣೆಯ ಸಮಯದಲ್ಲಿ ಶರದ್ ಅವರೊಂದಿಗೆ ಇದ್ದರು.

ಶುಕ್ರವಾರ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರತಿಭಾ ಪವಾರ್ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ, ಅವರ ಆರೋಗ್ಯ ವಿಚಾರಿಸಲು ಎನ್‌ಸಿಪಿ ನಾಯಕರ ಅಧಿಕೃತ ಭವನ ಸಿಲ್ವರ್ ಓಕ್‌ಗೆ ಅಜಿತ್ ಪವಾರ್ ಧಾವಿಸಿದ್ದರು.

ವರದಿಗಳ ಪ್ರಕಾರ, ಅಜಿತ್ ಪವಾರ್ ಮತ್ತು ಅವರ ಚಿಕ್ಕಮ್ಮ ಪ್ರತಿಭಾ ಆತ್ಮೀಯರಾಗಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿದೆ. ವಿಧಾನಸಭೆ ಚುನಾವಣೆಯ ನಂತರ ತರಾತುರಿಯಲ್ಲಿ ದೇವೇಂದ್ರ ಫಡ್ನವೀಸ್ ನೇತೃತ್ವದಲ್ಲಿ ರಚಿಸಿಸಲಾದ ಸಮ್ಮಿಶ್ರ ಸರ್ಕಾರವನ್ನು 2019 ರಲ್ಲಿ ಎನ್‌ಸಿಪಿ ತೆಕ್ಕೆಗೆ ಮರಳಿ ತರುವಲ್ಲಿ ಪ್ರತಿಭಾ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ಹೇಳಲಾಗುಗತ್ತಿದೆ.

andolanait

Recent Posts

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

24 mins ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

34 mins ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

5 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

10 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

10 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

10 hours ago