ಮುಂಬೈ : ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮೊಮ್ಮಗ, ಲೇಖಕ ಅರುಣ್ ಗಾಂಧಿ (89 ) ಅನಾರೋಗ್ಯದಿಂದ ಇಂದು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಿಧನರಾಗಿದ್ದಾರೆ. ಮೃತದೇಹದ ಅಂತ್ಯಕ್ರಿಯೆ ಇಂದು ಕೊಲ್ಲಾಪುರದಲ್ಲಿ ನಡೆಯಲಿದೆ ಎಂದು ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ.
ಲೇಖಕ ಮತ್ತು ಸಾಮಾಜಿಕ-ರಾಜಕೀಯ ಕಾರ್ಯಕರ್ತರಾದ ಅರುಣ್ ಗಾಂಧಿ ಏಪ್ರಿಲ್ 14, 1934 ರಂದು ಡರ್ಬನ್‌ನಲ್ಲಿ ಮಣಿಲಾಲ್ ಗಾಂಧಿ ಮತ್ತು ಸುಶೀಲಾ ಮಶ್ರುವಾಲಾ ದಂಪತಿಗೆ ಮಗನಾಗಿ ಜನಿಸಿದರು. ಸಾಮಾಜಿಕ ಕಾರ್ಯಕರ್ತನಾಗಿ ತಮ್ಮ ಅಜ್ಜ ಮಹಾತ್ಮಾ ಗಾಂಧಿ ಹಾದಿಯಲ್ಲಿ ಸಾಗಿದವರು.
ಅರುಣ್ ಗಾಂಧಿಯವರು ಹಲವು ಪುಸ್ತಕಗಳನ್ನು ಬರೆದಿದ್ದಾರೆ. ಅವುಗಳಲ್ಲಿ, ‘ದಿ ಗಿಫ್ಟ್ ಆಫ್ ಆಂಗರ್, ಅಂಡ್ ಅದರ್ ಲೆಸನ್ಸ್ ಫ್ರಂ ಮೈ ಗ್ರ್ಯಾಂಡ್ ಫಾದರ್ ಮಹಾತ್ಮ ಗಾಂಧಿ ಅವರ ಪ್ರಮುಖ ಪುಸ್ತಕಗಳಾಗಿವೆ.
ಮೃತರ ಅಂತ್ಯಕ್ರಿಯೆ ಸಂಜೆ 05:00 ರಿಂದ 06:30 ರವರೆಗೆ ಕೊಲ್ಲಾಪುರ ಜಿಲ್ಲೆಯ ಕರ್ವೀರ್, ನಂದವಾಲ್ ರಸ್ತೆಯಲ್ಲಿರುವ ಗಾಂಧಿ ಫೌಂಡೇಶನ್ ಆವರಣದಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.
ತುಂಬಾ ದಿನಗಳಿಂದ ಅವರಿಗೆ ಅನಾರೋಗ್ಯ ಕಾಡುತ್ತಿತ್ತು ಎನ್ನಲಾಗಿದೆ, ಅವರು ಸಾಮಾಜಿಕ ಕಾರ್ಯಕರ್ತರಾಗಿದ್ದರು. ಅವರ ಅಂತ್ಯಕ್ರಿಯೆ ಕೊಲ್ಹಾಪುರದಲ್ಲಿ ನೆರವೇರಲಿದೆ ಎಂದು ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ.
ಅರುಣ್ ಗಾಂಧಿ 1987ರಲ್ಲಿ ಕುಟುಂಬ ಸಮೇತ ಅಮೆರಿಕದಲ್ಲಿ ನೆಲೆಸಿದ್ದರು. ಇಲ್ಲಿ ಅವರು ಟೆನ್ನೆಸ್ಸೀಯ ಮೆಂಫಿಸ್‌ನಲ್ಲಿ ತಮ್ಮ ಜೀವನದ ಹಲವು ವರ್ಷಗಳನ್ನು ಕಳೆದರು. ಇಲ್ಲಿ ಅವರು ಕ್ರಿಶ್ಚಿಯನ್ ಬ್ರದರ್ಸ್ ವಿಶ್ವವಿದ್ಯಾಲಯದಲ್ಲಿ ಅಹಿಂಸೆಗೆ ಸಂಬಂಧಿಸಿದ ಸಂಸ್ಥೆಯನ್ನು ಸ್ಥಾಪಿಸಿದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…