BREAKING NEWS

ಮಳವಳ್ಳಿ| ಎಲೆಕ್ಟ್ರಿಕಲ್‌ ಸ್ಕೂಟರ್ ಸ್ಫೋಟ: ೪ ಬೈಕ್ ಬೆಂಕಿಗಾಹುತಿ

ಮಳವಳ್ಳಿ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದ ಬಳಿ ನಿಲ್ಲಿಸಿದ್ದ ಎಲೆಕ್ಟ್ರಿಕಲ್‌ ಸ್ಕೂಟರ್ ಸ್ಫೋಟಗೊಂಡು ನಾಲ್ಕಕ್ಕೂ ಹೆಚ್ಚು ಬೈಕ್ ಬೆಂಕಿಗಾಹುತಿಯಾದ ಘಟನೆ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ.

ಹಿಟ್ಟನಹಳ್ಳಿ ಕೊಪ್ಪಲು ಗ್ರಾಮದ ವಿವೇಕಾನಂದ ಪ್ರೌಢಶಾಲೆ ಶಿಕ್ಷಕ ಪ್ರಕಾಶ ಎಂಬವರಿಗೆ ಸೇರಿದ ಎಲೆಕ್ಟ್ರಿಕಲ್‌ ಸ್ಕೂಟರ್ ಸ್ಫೋಟಗೊಂಡಿದೆ.

ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಕ್ಕೆ ಆಯೋಜನೆಗೊಂಡಿದ್ದ ಶಿಕ್ಷಕರು ಹೊರಗಡೆ ತಮ್ಮ ವಾಹನಗಳನ್ನು ನಿಲ್ಲಿಸಿ ಒಳಗೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ಸ್ಫೋಟಗೊಂಡಿದ್ದು, ಈ ವೇಳೆ ಅಕ್ಕಪಕ್ಕ ನಿಲ್ಲಿಸಿದ್ದ ಮೂರು ಬೈಕ್ ಸಹ ಬೆಂಕಿಗಾಹುತಿಯಾಗಿವೆ.

ಸ್ಥಳಕ್ಕೆ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಈ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolanait

Recent Posts

108 ವರ್ಷದ ಶಾಲೆಯ ಕುಂಟು ನಡಿಗೆ..

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…

2 hours ago

ಎಚ್‌ಪಿವಿ ಲಸಿಕಾ ಅಭಿಯಾನಕ್ಕೆ ಸಿಗದ ನಿರೀಕ್ಷಿತ ಸ್ಪಂದನೆ

ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ  ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…

2 hours ago

‘ಟ್ರಾನ್ಸ್ ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ಆತುರದಲ್ಲಿ ಹೇರಲಾದ ಕ್ರಮ’

ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್‌ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…

2 hours ago

ರಂಗಸಮುದ್ರ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…

3 hours ago

ರಾಮಕೃಷ್ಣನಗರ ಉದ್ಯಾನ: ಸಂಪೂರ್ಣ ಅಧ್ವಾನ!

ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ…

3 hours ago