ನಾಳೆಯಿಂದ ಮಾದಪ್ಪನ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ

ಚಾಮರಾಜನಗರ: ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದ್ದು, ಅನ್‌ಲಾಕ್‌ ಘೋಷಿಸಿರುವ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ನಾಳೆಯಿಂದ (ಸೋಮವಾರ) ಅವಕಾಶ ಕಲ್ಪಿಸಲಾಗಿದೆ ಎಂದು ಮಲೆಮಹದೇಶ್ವರ ಸ್ವಾಮಿ‌ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ‌ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಅವರು, ನಾಳೆಯಿಂದ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಮಾತ್ರ ದರ್ಶನಕ್ಕೆ ಅವಕಾಶ ಇರಲಿದೆ. ದಾಸೋಹ, ತೀರ್ಥ ಪ್ರಸಾದ, ಲಾಡು ಪ್ರಸಾದ ಇರುವುದಿಲ್ಲ. ಯಾವುದೇ ಸೇವೆಗಳು, ಉತ್ಸವಗಳು, ಮುಡಿ ಸೇವೆ ಇರುವುದಿಲ್ಲ ಎಂದು ತಿಳಿಸಿದರು.

ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಕೋವಿಡ್ ಮಾರ್ಗಸೂಚಿ ಪ್ರಕಾರ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಬೆಟ್ಟದ ವಸತಿಗೃಹಗಳಲ್ಲಿ ತಂಗಲು ಅವಕಾಶ ಇರುವುದಿಲ್ಲ ಎಂದು ಸ್ಪಷ್ಪಪಡಿಸಿದರು.

× Chat with us