ನವದೆಹಲಿ : ರಾಷ್ಟ್ರಪತಿಗಳು ಶನಿವಾರ ಆಯೋಜಿಸಿರುವ ಜಿ20 ಔತಣಕೂಟಕ್ಕೆ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸಲಾಗಿಲ್ಲ ಎಂದು ಅವರ ಕಚೇರಿ ತಿಳಿಸಿದೆ.
ಮಲ್ಲಿಕಾರ್ಜುನ ಖರ್ಗೆ ಅವರು ಕ್ಯಾಬಿನೆಟ್ ಮಂತ್ರಿ ದರ್ಜೆಯನ್ನು ಹೊಂದಿದ್ದಾರೆ ಮತ್ತು ದೇಶದ ಅತಿದೊಡ್ಡ ವಿರೋಧ ಪಕ್ಷದ ಅಧ್ಯಕ್ಷರಾಗಿದ್ದಾರೆ.
ಬೇರೆ ಯಾವುದೇ ರಾಜಕೀಯ ಪಕ್ಷದ ನಾಯಕರಿಗೂ ಆಹ್ವಾನ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.
ಎಲ್ಲಾ ಕ್ಯಾಬಿನೆಟ್ ಮತ್ತು ರಾಜ್ಯ ಸಚಿವರು ಮತ್ತು ಎಲ್ಲಾ ಮುಖ್ಯಮಂತ್ರಿಗಳನ್ನು ಔತಣಕೂಟಕ್ಕೆ ಆಹ್ವಾನಿಸಲಾಗಿದೆ. ಭಾರತ ಸರಕಾರದ ಎಲ್ಲಾ ಕಾರ್ಯದರ್ಶಿಗಳು ಹಾಗೂ ದೊಡ್ಡ ಕೈಗಾರಿಕೋದ್ಯಮಿಗಳು ಸೇರಿದಂತೆ ಇತರ ಗಣ್ಯ ಅತಿಥಿಗಳು ಕೂಡ ಅತಿಥಿ ಪಟ್ಟಿಯಲ್ಲಿದ್ದಾರೆ.
ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್ ಹಾಗೂ ಎಚ್.ಡಿ.ದೇವೇಗೌಡರಿಗೂ ಆಹ್ವಾನ ನೀಡಲಾಗಿತ್ತು.
ಬಿಹಾರದ ನಿತೀಶ್ ಕುಮಾರ್, ಜಾರ್ಖಂಡ್ ನ ಹೇಮಂತ್ ಸೊರೆನ್, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ತಮಿಳುನಾಡಿನ ಎಂ.ಕೆ. ಸ್ಟಾಲಿನ್, ದೆಹಲಿಯ ಅರವಿಂದ ಕೇಜ್ರಿವಾಲ್ ಮತ್ತು ಪಂಜಾಬ್ ನ ಭಗವಂತ್ ಮಾನ್ ಅವರು ಔತಣಕೂಟದಲ್ಲಿ ಪಾಲ್ಗೊಳ್ಳುವುದಾಗಿ ಖಚಿತಪಡಿಸಿದ ಮುಖ್ಯಮಂತ್ರಿಗಳಲ್ಲಿ ಸೇರಿದ್ದಾರೆ.
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ…
ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…
ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…