ಮೈಸೂರು: ಮಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಉಗ್ರ ಶಾರಿಖ್ ಜೊತೆ ವಾಸವಿದ್ದ ಸಹಚರನನ್ನು ಮೈಸೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಶಂಕಿತ ಭಯೋತ್ಪಾಧಕ ಶಾರಿಖ್‌ನೊಂದಿಗೆ ಒಡನಾಟ ಹೊಂದಿದ್ದ ಆತನ ಸಹಚರನನ್ನು ಮೇಟಗಳ್ಳಿಯ ಲೋಕನಾಯಕನಗರದ ರೂಮ್‌ನಲ್ಲೇ ಪೊಲೀಸರು ವಶಕ್ಕೆ ಪಡೆದು, ಮೇಟಗಳ್ಳಿ ಠಾಣೆಯಲ್ಲಿ ವಿಚಾರಣೆ ನಡೆಸಿ ಅಜ್ಞಾತ ಸ್ಥಳದಲ್ಲಿ ವಿಚಾರಣೆ ಮುಂದುವರಿಸಿದ್ದಾರೆ ಎನ್ನಲಾಗಿದೆ.
ಸಭ್ಯನಂತೆ ಇದ್ದ ಉಗ್ರ
ಶಂಕಿತ ಉಗ್ರ ತಾನಿದ್ದ ರೂಮ್‌ನಿಂದ ಹೊರ ಬಂದರೂ ನೆರೆಹೊರೆಯವರೊಂದಿಗೆ ಮಾತನಾಡುತ್ತಿರಲಿಲ್ಲ. ನೋಡಲು ವಿದ್ಯಾರ್ಥಿಯಂತೆ ಹಾಗೂ ಯಾವುದೋ ಕಂಪನಿಯಲ್ಲಿ ಕೆಲಸ ಮಾಡುವವರಂತೆ ಓಡಾಡುತ್ತಿದ್ದ. ಸಂಜೆ ಮನೆ ಸೇರಿದರೆ ಹೊರಗೆ ಬರುತ್ತಿರಲಿಲ್ಲ. ಸರಿಯಾಗಿ ಬಾಡಿಗೆ ನೀಡುತ್ತಿರಲಿಲ್ಲ ಎಂದು ಸ್ಥಳೀಯರು ಮತ್ತು ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಪೊಲೀಸ್ ಆಯುಕ್ತ ರಮೇಶ್ ಅವರ ಮಾರ್ಗದರ್ಶನದಲ್ಲಿ ಮೇಟಗಳ್ಳಿ ಪೊಲೀಸ್, ಸಿಸಿಬಿ ಬೆಂಗಳೂರಿಂದ ಬಾಂಬ್ ನಿಷ್ಕ್ರೀಯ ದಳ, ಭಯೋತ್ಪಾಧಕ ನಿಗ್ರಹ ದಳದ ಸಿಬ್ಬಂದಿ
ಸೇರಿದಂತೆ ವಿವಿಧ ಘಟಕಗಳ ಪೊಲೀಸರು, ಹಿರಿಯ ಅಧಿಕಾರಿಗಳು ಭಾನುವಾರ ಮುಂಜಾನೆ 3 ಗಂಟೆಯಿಂದ ಮಧ್ಯಾಹ್ನ 3ಗಂಟೆವರೆಗೂ ಕಾರ್ಯಾಚರಣೆ ನಡೆಸಿದ್ದಾರೆ. ಶೋಧನೆ ಮಾಡುವ ಸಂದರ್ಭದಲ್ಲಿ ಪೊಲೀಸರು ಸ್ಥಳೀಯರು ಸೇರಿದಂತೆ ಯಾರೊಬ್ಬರೂ ಓಡಾಡದಂತೆ ಮನೆ ಇರುವ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಿದ್ದರು. ಇದರಿಂದ ಕೆಲಕಾಲ ಸ್ಥಳೀಯರಲ್ಲಿ ಆತಂಕ ನಿರ್ಮಾಣವಾಗಿತ್ತು.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…