BREAKING NEWS

ಮಣಿಪುರ ಬೆತ್ತಲೆ ಮೆರವಣಿ: ಇಂಡಿಯಾ ಮೌನವಾಗಿರೊಲ್ಲ: ರಾಹುಲ್ ಗಾಂಧಿ ಆಕ್ರೋಶ

ನವದೆಹಲಿ : ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ಎರಡು ತಿಂಗಳ ಹಿಂದಿನ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ಮಣಿಪುರದ ಪರಿಸ್ಥಿತಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಭಾರತದ ಪರಿಕಲ್ಪನೆ ಮೇಲೆ ದಾಳಿ ನಡೆಯುತ್ತಿರುವಾಗ ‘ಇಂಡಿಯಾ’ ಸುಮ್ಮನೆ ಮೌನವಾಗಿ ಇರುವುದಿಲ್ಲ” ಎನ್ನುವ ಮೂಲಕ ವಿರೋಧ ಪಕ್ಷಗಳ ಮೈತ್ರಿಕೂಟವು ಮಣಿಪುರ ಹಿಂಸಾಚಾರದ ಕುರಿತು ಸುಮ್ಮನಿರುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.

“ಪ್ರಧಾನಿ ಅವರ ಮೌನ ಹಾಗೂ ನಿಷ್ಕ್ರಿಯತೆಯು ಮಣಿಪುರವನ್ನು ಅರಾಜಕತೆಗೆ ತಳ್ಳಿದೆ. ಮಣಿಪುರದಲ್ಲಿ ಭಾರತದ ಪರಿಕಲ್ಪನೆಯ ಮೇಲೆ ನಡೆಯುತ್ತಿರುವಾಗ ‘ಇಂಡಿಯಾ’ ಮೌನವಾಗಿ ಇರುವುದಿಲ್ಲ” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ, ವೈರಲ್ ವಿಡಿಯೋ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಮಣಿಪುರದಲ್ಲಿ ನಡೆದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಚಿತ್ರಗಳು ಹೃದಯ ವಿದ್ರಾವಕವಾಗಿವೆ ಎಂದಿದ್ದಾರೆ.

“ಮಹಿಳೆಯರ ಮೇಲಿನ ಹಿಂಸಾಚಾರದ ಈ ಭಯಾನಕ ಘಟನೆಯನ್ನು ಎಷ್ಟು ಖಂಡಿಸಿದರೂ ಸಾಲದು. ಸಮಾಜದಲ್ಲಿ ಹಿಂಸಾಚಾರದ ಗರಿಷ್ಠ ಸಂಕಷ್ಟಗಳನ್ನು ಮಹಿಳೆಯರು ಮತ್ತು ಮಕ್ಕಳೇ ಅನುಭವಿಸುತ್ತಾರೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

“ಮಣಿಪುರದಲ್ಲಿ ಶಾಂತಿ ಸ್ಥಾಪಿಸುವ ಪ್ರಯತ್ನಗಳನ್ನು ಹೆಚ್ಚಿಸುವುದರ ಜತೆಗೆ ನಾವು ಹಿಂಸಾಚಾರವನ್ನು ಒಂದೇ ಧ್ವನಿಯಲ್ಲಿ ಖಂಡಿಸಬೇಕಿದೆ. ಕೇಂದ್ರ ಸರ್ಕಾರ, ಮಿ. ಪ್ರಧಾನಿ ಅವರು ಮಣಿಪುರದಲ್ಲಿನ ಹಿಂಸಾತ್ಮಕ ಘಟನೆಗಳ ಕಡೆಗೆ ಏಕೆ ತಮ್ಮ ಕಣ್ಣುಗಳನ್ನು ಕುರುಡಾಗಿಸಿಕೊಂಡಿದ್ದಾರೆ? ಅಂತಹ ಚಿತ್ರಗಳು ಮತ್ತು ಹಿಂಸಾತ್ಮಕ ಘಟನೆಗಳು ಅವರನ್ನು ಕಲಕುವುದಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಸಾವಿರಾರು ಸಾವುಗಳಲ್ಲಿ ಮಾನವೀಯತೆ ಸತ್ತಿದೆ! ಮಹಿಳೆಯರು ಅವಮಾನ ಹಾಗೂ ಶೋಷಿತರಾಗುವುದು, ಬೆತ್ತಲೆಯಾಗಿ ಮೆರವಣಿಗೆಯಾಗುವುದನ್ನು ತಡೆಯುವುದು ಈ ಬಿಜೆಪಿ ಸರ್ಕಾರಕ್ಕೆ ಸಾಧ್ಯವಾಗದೆ ಇದ್ದರೆ, ಅದನ್ನು ಸುಮ್ಮನೆ ವಜಾಗೊಳಿಸಬೇಕು. ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಹೇರುವುದಕ್ಕೆ ಮೋದಿ ಸರ್ಕಾರವನ್ನು ತಡೆಯುತ್ತಿರುವುದು ಏನು?” ಎಂದು ಮಹಿಳಾ ಕಾಂಗ್ರೆಸ್ ಮುಖ್ಯಸ್ಥೆ ನೆಟ್ಟಾ ಡಿಸೋಜಾ ಕಿಡಿಕಾರಿದ್ದಾರೆ.

ಪೊಲೀಸರು ಅಪರಿಚಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳ ವಿರುದ್ಧ ತೌಬುಲ್ ಜಿಲ್ಲೆಯ ನಾಂಗ್‌ಪೊಕ್ ಸೆಕ್ಮೈ ಪೊಲೀಸ್ ಠಾಣೆಯಲ್ಲಿ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
andolanait

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

2 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

2 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

2 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago