BREAKING NEWS

ಮಣಿಪುರ ಹಿಂಸಾಚಾರ: ಪ್ರಧಾನಿ ಮೋದಿ ಹೇಳಿಕೆಗೆ ಆಗ್ರಹಿಸಿ ‘ಇಂಡಿಯಾ’ದಿಂದ ಅಹೋರಾತ್ರಿ ಧರಣಿ

ನವದೆಹಲಿ: ಎಎಪಿ ನಾಯಕ ಸಂಜಯ್ ಸಿಂಗ್ ಅಮಾನತು ಖಂಡಿಸಿ ಮತ್ತು ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳ ಮೈತ್ರಿಕೂಟ ಐಎನ್ ಡಿಎಐ(ಇಂಡಿಯಾ) ಸಂಸತ್ತಿನ ಆವರಣದಲ್ಲಿ ಅಹೋರಾತ್ರಿ ಧರಣಿ ನಡೆಸಲು ಸೋಮವಾರ ನಿರ್ಧರಿಸಿದೆ.

ಇಂದು ಬೆಳಗ್ಗೆ ಕಲಾಪ ಆರಂಭಕ್ಕೂ ಮುನ್ನವೇ ಸಂಸತ್ತಿನ ಗಾಂಧಿ ಪ್ರತಿಮೆಯ ಬಳಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರ ನೇತೃತ್ವದಲ್ಲಿ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭಿಸಿದ್ದು, ಇಂಡಿಯಾ ಮೈತ್ರಿಕೂಟದ ನಾಯಕರು ಅಹೋರಾತ್ರಿ ಧರಣಿ ನಡೆಸಲಿದ್ದಾರೆ ಎಂದು ಹಿರಿಯ ಮುಖಂಡರು ತಿಳಿಸಿದ್ದಾರೆ. ಅಲ್ಲದೆ ಮಂಗಳವಾರವೂ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.

ಕಳೆದ ವರ್ಷ ಜುಲೈನಲ್ಲಿ 20 ರಾಜ್ಯಸಭಾ ಸದಸ್ಯರನ್ನು ಅಮಾನತುಗೊಳಿಸಿದ ನಂತರ ಪ್ರತಿಪಕ್ಷಗಳು ಸಂಸತ್ತಿನ ಸಂಕೀರ್ಣದೊಳಗೆ 50 ಗಂಟೆಗಳ ಕಾಲ ಅಹೋರಾತ್ರಿ ಧರಣಿ ನಡೆಸಿದ್ದವು.

ಇದೀಗ ಮುಂಗಾರು ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಂಡಿರುವ ಎಎಪಿ ಸಂಸದ ಸಂಜಯ್ ಸಿಂಗ್ ಅವರು ಇಂಡಿಯಾದ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಸಂಜಯ್ ಸಿಂಗ್ ಅವರ ಪತ್ನಿ ಈಗಾಗಲೇ ಸ್ಥಳಕ್ಕೆ ಅಗತ್ಯ ವಸ್ತುಗಳನ್ನು ತಂದಿದ್ದಾರೆ.

ಎಲ್ಲ ಪಕ್ಷಗಳು ತಮ್ಮ ನಾಯಕರ ಪಟ್ಟಿಯನ್ನು ಸಿದ್ಧಪಡಿಸಿದ್ದು, ಅವರು ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸುತ್ತಾರೆ. ಪಕ್ಷಗಳಲ್ಲಿ ಸಂಪೂರ್ಣ ಒಗ್ಗಟ್ಟು ಇದೆ. ಸಿಂಗ್ ಅವರ ಅಮಾನತನ್ನು ಖಂಡಿಸಲಾಗುತ್ತಿದೆ. ಆದರೆ ಇದು ರಾಜ್ಯಸಭೆಯಲ್ಲಾಗಲಿ ಲೋಕಸಭೆಯಲ್ಲಾಗಲಿ ಮಣಿಪುರದ ಬಗ್ಗೆ ಪ್ರಧಾನಿ ಮೋದಿ ಮಾತನಾಡಬೇಕೆಂದು ಒತ್ತಾಯಿಸುವ ಪ್ರತಿಭಟನೆಯಾಗಿದೆ ಎಂದು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮುಕ್ತ ಚರ್ಚೆಗೆ ಅವಕಾಶ ನೀಡಬೇಕು ಎಂಬ ಬೇಡಿಕೆಗೆ ಇಂಡಿಯಾ ಮೈತ್ರಿಕೂಟದ ಎಲ್ಲಾ ನಾಯಕರು ಅಚಲವಾಗಿದ್ದಾರೆ ಮತ್ತು ಅವರನ್ನು ಸಮಾಧಾನಪಡಿಸುವ ಸರ್ಕಾರದ ಎಲ್ಲಾ ಪ್ರಯತ್ನಗಳನ್ನು ಹಲವು ಪಕ್ಷಗಳು ತಿರಸ್ಕರಿಸಿವೆ ಎಂದು ಮೂಲಗಳು ತಿಳಿಸಿವೆ.

andolanait

Recent Posts

ರಣರಂಗದಿಂದ ಪಲಾಯನಕ್ಕೆ ಟ್ರಂಪ್ ಸಿದ್ಧತೆ..!

ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ವಿರೋಧಿ ಸಿದ್ಧಾಂತದ ರಾಜ್ಯಗಳ ಜತೆ ಬಿಜೆಪಿ ಸೆಣಸಾಟ

೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು…

1 hour ago

ಗಂಡಸಿನ ಕೋಪ ಹೊಳೆ ಸಾಗರ… ಹೆಂಗಸಿನ ಕೋಪ ಗುಂಡಿ ನೀರು

ಅನಿಲ್ ಅಂತರಸಂತೆ ಹಳ್ಳಿ ಸೊಗಡಿನ ದೇಸಿ ಕಂಠಸಿರಿಯಲ್ಲಿ ಇವರ ಜಾನ ಪದ ಹಾಡುಗಳನ್ನು ಕೇಳುವುದೇ ಬಲು ಹಿತಕರ. ಮೂಲತಃ ಎಚ್.ಡಿ.ಕೋಟೆ…

1 hour ago

ಒಂದು ಹಸಿ ಅಸಹ್ಯ ಹಾಡಿನ ಕುರಿತು ಇಬ್ಬರು ಬರಹಗಾರ್ತಿಯರು

ಇಂತಹ ಸಂದರ್ಭಗಳಲ್ಲಿ ಮೌನವಾಗಿರುವುದು ಅಪರಾಧದಲ್ಲಿ ಪಾಲುಗಾರರಾದಂತೆಯೇ ಸಂಧ್ಯಾರಾಣಿ, ಲೇಖಕಿ ಮತ್ತು ಚಿತ್ರ ಸಾಹಿತಿ ‘ರ’ ಚಿತ್ರದ ಹಾಡಿನ ಬಗ್ಗೆ ವಿರೋಧ,…

1 hour ago

ಕೆಟ್ಟ ಯುದ್ಧವೊಂದರ ಕೆಲವು ಒಳ್ಳೆಯ ಅಡ್ಡ ಪರಿಣಾಮಗಳು

ಶೇಷಾದ್ರಿ ಗಂಜೂರು ಮಧ್ಯಪ್ರಾಚ್ಯದಿಂದ ಪ್ರತಿನಿತ್ಯ ವಿಸ್ತರಿಸುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದರೆ, ಇಸ್ರೇಲಿನ ಆಕ್ರಮಣಕಾರಿ ಧೋರಣೆ, ಅಮೆರಿಕದ ಟ್ರಂಪ್ ದುರಾಡಳಿತದ ತರ್ಕರಹಿತ ನಡೆಗಳು…

2 hours ago

ಮಾನವ-ವನ್ಯಪ್ರಾಣಿ ಸಂಘರ್ಷ ನಿವಾರಣೆಗೆ ಕಾರ್ಯತಂತ್ರ

ನವೀನ್ ಡಿಸೋಜ ಮಡಿಕೇರಿ: ವನ್ಯಜೀವಿ-ಮಾನವ ಸಂಘರ್ಷ ತಡೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಕರ್ನಾಟಕ ಮಾನವ -…

2 hours ago