BREAKING NEWS

ಮಣಿಪುರ ಹಿಂಸಾಚಾರ: ಸಿಎಂ’ ಬಿರೇನ್ ಸಿಂಗ್ ವಜಾಗೊಳಿಸುವಂತೆ ಖರ್ಗೆ ಆಗ್ರಹ

ನವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬುಧವಾರ ತೀವ್ರ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಅಸಮರ್ಥ ಮುಖ್ಯಮಂತ್ರಿಯನ್ನು ಮೊದಲು ವಜಾಗೊಳಿಸುವಂತೆ ಒತ್ತಾಯಿಸಿದರು.

ಸುಂದರ ಮಣಿಪುರ ರಾಜ್ಯವನ್ನು ‘ಯುದ್ಧಭೂಮಿ’ಯನ್ನಾಗಿ ಮಾಡಲಾಗಿದೆ ಎಂದು ಖರ್ಗೆ ಆರೋಪಿಸಿದ್ದಾರೆ.

“147 ದಿನಗಳಿಂದ ಮಣಿಪುರದ ಜನ ನರಳುತ್ತಿದ್ದಾರೆ. ಆದರೆ ಪ್ರಧಾನಿ ಮೋದಿಗೆ ಆ ರಾಜ್ಯಕ್ಕೆ ಭೇಟಿ ನೀಡಲು ಸಮಯವಿಲ್ಲ. ಈ ಹಿಂಸಾಚಾರದಲ್ಲಿ ವಿದ್ಯಾರ್ಥಿಗಳು ಗುರಿಯಾಗುತ್ತಿರುವ ಭಯಾನಕ ಚಿತ್ರಗಳು ಮತ್ತೊಮ್ಮೆ ಇಡೀ ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ. ಈ ಹಿಂಸಾಚಾರದಲ್ಲಿ ಮಹಿಳೆಯರು ಮತ್ತು ಮಕ್ಕಳನ್ನು ಅಸ್ತ್ರವಾಗಿಸಿಕೊಳ್ಳಲಾಗುತ್ತಿದೆ” ಎಂದು ಖರ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಸುಂದರವಾದ ಮಣಿಪುರ ರಾಜ್ಯ ರಣರಂಗವಾಗಿ ಮಾರ್ಪಟ್ಟಿದೆ, ಎಲ್ಲದಕ್ಕೂ ಬಿಜೆಪಿಯೇ ಕಾರಣ! ಬಿಜೆಪಿಯ ಅಸಮರ್ಥ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರನ್ನು ಪ್ರಧಾನಿ ಮೋದಿ ವಜಾಗೊಳಿಸಿಬೇಕು. ಯಾವುದೇ ಪ್ರಕ್ಷುಬ್ಧತೆಯನ್ನು ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಮೊದಲ ಕ್ರಮ ಇದಾಗಿದೆ” ಎಂದು ಖರ್ಗೆ ಹೇಳಿದ್ದಾರೆ.

ಮಣಿಪುರದಲ್ಲಿ ಇಬ್ಬರು ಯುವಕರ ಮೃತ ದೇಹಗಳನ್ನು ತೋರಿಸುವ ವಿಡಿಯೋ ವೈರಲ್ ಆದ ನಂತರ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.

andolanait

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

5 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

6 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

7 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

7 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

9 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

11 hours ago