Mysore
21
overcast clouds
Light
Dark

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ: ವೀಡಿಯೋ ತೆಗೆಯುವಂತೆ ಟ್ವಿಟರ್ ಗೆ ಎನ್‌ಸಿಡಬ್ಲ್ಯೂ ನಿರ್ದೇಶನ

ನವೆದಹಲಿ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಅವರ ಮೇಲೆ ಹಲ್ಲೆ ನಡೆಸಿದ ಅವಮಾನಕರ ಕೃತ್ಯ ತೋರಿಸುವ ವೀಡಿಯೊವನ್ನು ತೆಗೆದು ಹಾಕುವಂತೆ ಟ್ವಿಟರ್ ಇಂಡಿಯಾಗೆ ನಿರ್ದೇಶನ ನೀಡಿರುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ಗುರುವಾರ ಹೇಳಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಷ್ಟ್ರೀಯ ಮಹಿಳಾ ಆಯೋಗ, ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ಅವಮಾನಕರ ಕೃತ್ಯವನ್ನು ತೋರಿಸುವ ವೀಡಿಯೊವನ್ನು ತೆಗೆದುಹಾಕಲು ಟ್ವೀಟರ್ ಇಂಡಿಯಾದ ಸಾರ್ವಜನಿಕ ನೀತಿಯ ಮುಖ್ಯಸ್ಥರಿಗೆ  ಔಪಚಾರಿಕವಾಗಿ ನಿರ್ದೇಶನ ನೀಡಲಾಗಿದೆ.  ಈ ವೀಡಿಯೊದಲ್ಲಿ ಸಂತ್ರಸ್ತರನ್ನು ಗುರುತಿಸಬಹುದಾಗಿದ್ದು, ಶಿಕ್ಷಾರ್ಹ ಅಪರಾಧವಾಗಿದೆ ಎಂದು ಹೇಳಿದೆ.

ಈ ಹೀನಕೃತ್ಯವೆಸಗಿದ ಅಪರಿಚಿತ ಶಸ್ತ್ರಸಜ್ಜಿತ ವ್ಯಕ್ತಿಗಳ ವಿರುದ್ಧ ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪೊಲೀಸ್ ಠಾಣೆಯಲ್ಲಿ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ 150 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ