ನವೆದಹಲಿ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಅವರ ಮೇಲೆ ಹಲ್ಲೆ ನಡೆಸಿದ ಅವಮಾನಕರ ಕೃತ್ಯ ತೋರಿಸುವ ವೀಡಿಯೊವನ್ನು ತೆಗೆದು ಹಾಕುವಂತೆ ಟ್ವಿಟರ್ ಇಂಡಿಯಾಗೆ ನಿರ್ದೇಶನ ನೀಡಿರುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ಗುರುವಾರ ಹೇಳಿದೆ.
ಈ ಕುರಿತು ಟ್ವೀಟ್ ಮಾಡಿರುವ ರಾಷ್ಟ್ರೀಯ ಮಹಿಳಾ ಆಯೋಗ, ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ಅವಮಾನಕರ ಕೃತ್ಯವನ್ನು ತೋರಿಸುವ ವೀಡಿಯೊವನ್ನು ತೆಗೆದುಹಾಕಲು ಟ್ವೀಟರ್ ಇಂಡಿಯಾದ ಸಾರ್ವಜನಿಕ ನೀತಿಯ ಮುಖ್ಯಸ್ಥರಿಗೆ ಔಪಚಾರಿಕವಾಗಿ ನಿರ್ದೇಶನ ನೀಡಲಾಗಿದೆ. ಈ ವೀಡಿಯೊದಲ್ಲಿ ಸಂತ್ರಸ್ತರನ್ನು ಗುರುತಿಸಬಹುದಾಗಿದ್ದು, ಶಿಕ್ಷಾರ್ಹ ಅಪರಾಧವಾಗಿದೆ ಎಂದು ಹೇಳಿದೆ.
ಈ ಹೀನಕೃತ್ಯವೆಸಗಿದ ಅಪರಿಚಿತ ಶಸ್ತ್ರಸಜ್ಜಿತ ವ್ಯಕ್ತಿಗಳ ವಿರುದ್ಧ ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪೊಲೀಸ್ ಠಾಣೆಯಲ್ಲಿ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ 150 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ.
ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…
ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಚಳಿ ತುಂಬಾ ಜಾಸ್ತಿಯಿದ್ದು, ಶೀತಗಾಳಿ ಹೆಚ್ಚಾಗಲು ಕರಾವಳಿ ತೀರ ಪ್ರದೇಶದಲ್ಲಾದ ವಾತಾವರಣ ಬದಲಾವಣೆ ಕಾರಣ ಎಂದು…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ ಮಾಡಿರುವ ವಿಚಾರ ಭಾರೀ ವಿವಾದಕ್ಕೆ…
ಕುವೈತ್/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಕುವೈತ್ ಪ್ರವಾಸದಲ್ಲಿದ್ದು, ಇಲ್ಲಿನ ರಾಜ ಶೇಕ್ ಮಿಶಾಲ್ ಅಲ್…
ಕಲಬುರ್ಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ…
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…