ತುಮಕೂರು : ಸಿದ್ಧಗಂಗಾ ಮಠದ ಉತ್ತರಾಧಿಕಾರಿಯಾಗಿ ಸಿದ್ಧಗಂಗಾ ಪಾಲಿಟೆಕ್ನಿಕ್ನಲ್ಲಿ ಉಪನ್ಯಾಸಕನಾಗಿರುವ ಮನೋಜ್ ಕುಮಾರ್ ಅವರನ್ನು ನೇಮಕ ಮಾಡಿ ಸಿದ್ದಲಿಂಗ ಸ್ವಾಮೀಜಿ ಆದೇಶ ಹೊರಡಿಸಿದ್ದಾರೆ. ಮೈಲನಹಳ್ಳಿಯ ಷಡಕ್ಷರಿ, ವಿರೂಪಾಕ್ಷಮ್ಮ ದಂಪತಿಯ ಪುತ್ರ ಮನೋಜ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಮೈಲನಹಳ್ಳಿ ನಿವಾಸಿ. ಮೇ 23ರ ಬಸವ ಜಯಂತಿಯಂದು ನಿರಂಜನ ಪಟ್ಟಾಧಿಕಾರ ನೆರವೇರಲಿದೆ. ಸಿದ್ದಗಂಗಾ ಮಠದ ಜೊತೆಗೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಂಚುಗಲ್ ಬಂಡೇಮಠಕ್ಕೆ K.M.ಹರ್ಷ ಎನ್ನುವವರು ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗಿದೆ. K.M.ಹರ್ಷ ಅವರು ತುಮಕೂರು ತಾಲೂಕಿನ ಕಾಳೇನಹಳ್ಳಿ ನಿವಾಸಿಯಾಗಿದ್ದಾರೆ. ದೇವನಹಳ್ಳಿಯ ಬಸವಕಲ್ಯಾಣ ಮಠಕ್ಕೆ ಮಂಡ್ಯ ಜಿಲ್ಲೆಯ ಬಿಳುಗಲಿ ನಿವಾಸಿ ಗೌರೀಶ್ ಕುಮಾರ್ ನೇಮಕ ಮಾಡಲಾಗಿದೆ.
ತ್ರಿವಿಧ ದಾಸೋಹಿ ಮಠ ಎಂದು ವಿಶ್ವಖ್ಯಾತಿ ಪಡೆದಿರುವ ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯರಾದ ನಂತರ ಉತ್ತರಾಧಿಕಾರಿಯಾಗಿ ಸಿದ್ಧಲಿಂಗ ಸ್ವಾಮೀಜಿ ಆಡಳಿತ ಮಾಡುತ್ತಿದ್ದಾರೆ. ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಉತ್ತರಾಧಿಕಾರಿ ಆಯ್ಕೆ ಪ್ರಕ್ರಿಯೆ ಈಗ ನಡೆದಿದೆ.
ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…
ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ…