BREAKING NEWS

ಸಿದ್ಧಗಂಗಾ ಮಠದ ಉತ್ತರಾಧಿಕಾರಿಯಾಗಿ ಮನೋಜ್ ಕುಮಾರ್​ ನೇಮಕ

ತುಮಕೂರು : ಸಿದ್ಧಗಂಗಾ ಮಠದ ಉತ್ತರಾಧಿಕಾರಿಯಾಗಿ ಸಿದ್ಧಗಂಗಾ ಪಾಲಿಟೆಕ್ನಿಕ್​ನಲ್ಲಿ ಉಪನ್ಯಾಸಕನಾಗಿರುವ ಮನೋಜ್ ಕುಮಾರ್​ ಅವರನ್ನು ನೇಮಕ ಮಾಡಿ ಸಿದ್ದಲಿಂಗ ಸ್ವಾಮೀಜಿ ಆದೇಶ ಹೊರಡಿಸಿದ್ದಾರೆ. ಮೈಲನಹಳ್ಳಿಯ ಷಡಕ್ಷರಿ, ವಿರೂಪಾಕ್ಷಮ್ಮ ದಂಪತಿಯ ಪುತ್ರ ಮನೋಜ್​ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಮೈಲನಹಳ್ಳಿ ನಿವಾಸಿ. ಮೇ 23ರ ಬಸವ ಜಯಂತಿಯಂದು ನಿರಂಜನ ಪಟ್ಟಾಧಿಕಾರ ನೆರವೇರಲಿದೆ. ಸಿದ್ದಗಂಗಾ ಮಠದ ಜೊತೆಗೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಂಚುಗಲ್​ ಬಂಡೇಮಠಕ್ಕೆ K.M.ಹರ್ಷ ಎನ್ನುವವರು ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗಿದೆ. K.M.ಹರ್ಷ ಅವರು ತುಮಕೂರು ತಾಲೂಕಿನ ಕಾಳೇನಹಳ್ಳಿ ನಿವಾಸಿಯಾಗಿದ್ದಾರೆ. ದೇವನಹಳ್ಳಿಯ ಬಸವಕಲ್ಯಾಣ ಮಠಕ್ಕೆ ಮಂಡ್ಯ ಜಿಲ್ಲೆಯ ಬಿಳುಗಲಿ ನಿವಾಸಿ ಗೌರೀಶ್​ ಕುಮಾರ್​ ನೇಮಕ ಮಾಡಲಾಗಿದೆ.
ತ್ರಿವಿಧ ದಾಸೋಹಿ ಮಠ ಎಂದು ವಿಶ್ವಖ್ಯಾತಿ ಪಡೆದಿರುವ ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯರಾದ ನಂತರ ಉತ್ತರಾಧಿಕಾರಿಯಾಗಿ ಸಿದ್ಧಲಿಂಗ ಸ್ವಾಮೀಜಿ ಆಡಳಿತ ಮಾಡುತ್ತಿದ್ದಾರೆ. ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಉತ್ತರಾಧಿಕಾರಿ ಆಯ್ಕೆ ಪ್ರಕ್ರಿಯೆ ಈಗ ನಡೆದಿದೆ.

lokesh

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

9 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

9 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

15 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

15 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

16 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

16 hours ago