BREAKING NEWS

ಬಿಜೆಪಿ ಮತ್ತು ಜೆಡಿಎಸ್​ನ ಹಲವು ಮಂದಿ ಕಾಂಗ್ರೆಸ್​ ಸೇರಲಿದ್ದಾರೆ: ಚಲುವರಾಯಸ್ವಾಮಿ

ಮೈಸೂರು : ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದ 10 ರಿಂದ 15 ಮಂದಿ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ. ಸದ್ಯಕ್ಕೆ ಕಾಂಗ್ರೆಸ್ ಸೇರ್ಪಡೆಯಾಗುವವರ ಹೆಸರನ್ನು ಹೇಳಲು ಸಾಧ್ಯವಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

ಖಾಸಗಿ ಕಾರ್ಯಕ್ರಮ ನಿಮಿತ್ತ ಮೈಸೂರಿಗೆ ಇಂದು ಆಗಮಿಸಿದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ 10 ರಿಂದ 15 ಮಂದಿ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷ ಸೇರಲು ಸಿದ್ಧರಿದ್ದಾರೆ. ಈ ಬಗ್ಗೆ ಮಾತುಕತೆ ನಡೆಯುತ್ತಿದ್ದು, ಕೆಲವೇ ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ. ಯಾರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂಬ ವಿಚಾರ ಹಾಗೂ ಸೇರುವವರ ಹೆಸರನ್ನು ಈಗ ಹೇಳಲು ಸಾಧ್ಯವಿಲ್ಲ. ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರುವುದು ಖಚಿತ” ಎಂದರು.

ಸುಪ್ರೀಂ ಕೋರ್ಟ್​ನಿಂದ ತಾತ್ಕಾಲಿಕ ತೀರ್ಪು : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರ ಮತ್ತು ಶಾಸಕರ ಅಸಮಾಧಾನದ ಬಗ್ಗೆ ನಮಗೆ ತಿಳಿದಿದೆ. ನಮ್ಮ ರಾಜ್ಯದವರು ಕೇಂದ್ರದ ಕಮಿಟಿ ಮುಂದೆ ಸಮ್ಮತವಾಗಿ ವಾದ ಮಂಡಿಸಿದ್ದಾರೆ. ಆದರೆ, ತಮಿಳುನಾಡಿನವರು ಸಭೆಯಿಂದ ಹೊರ ನಡೆದಿದ್ದು. ಪ್ರತಿದಿನ 15 ಸಾವಿರ ಕ್ಯೂಸೆಕ್​ ನೀರನ್ನು ಬಿಡುವಂತೆ ಕೇಳಿದ್ದಾರೆ. ಇದಕ್ಕೆ ನಾವು ಒಪ್ಪದ ಕಾರಣ ಅವರು ಸಭೆಯಿಂದ ಹೊರ ನಡೆದಿದ್ದಾರೆ.

ಇಂದು ಸುಪ್ರೀಂ ಕೋರ್ಟ್​ನಿಂದ ತಾತ್ಕಾಲಿಕ ತೀರ್ಪು ಬರಲಿದ್ದು, ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ಮಾಡುತ್ತೇವೆ. ರಾಜ್ಯದ ರೈತರ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ನಿಮ್ಮ ಬೆಳೆಗಳಿಗೆ 15 ದಿನಗಳಿಗೊಮ್ಮೆ ನೀರು ಬಿಡುತ್ತೇವೆ. ಸದ್ಯಕ್ಕೆ ತಮಿಳುನಾಡಿಗೆ ಕೇಂದ್ರದ ತೀರ್ಮಾನದಂತೆ ನಿತ್ಯವೂ ನೀರು ಹರಿಸುತ್ತಿದ್ದೇವೆ ಎಂದು ಹೇಳಿದರು.

ಮಳೆ ಕೊರತೆ : ಜೂನ್ ಮತ್ತು ಆಗಸ್ಟ್​ನಲ್ಲಿ ಮಳೆ ಕೊರತೆ ಆಗಿದ್ದು, ರಾಜ್ಯದಲ್ಲಿ ಬರ ಘೋಷಣೆ ಮಾಡುವ ಬಗ್ಗೆ ಸಭೆ ನಡೆಸುತ್ತೇವೆ. ಶೇ. 60 ರಷ್ಟು ಬರ ಇದ್ದರೆ ಮಾತ್ರ ಕೇಂದ್ರ ಅನುದಾನ ಬಿಡುಗಡೆ ಮಾಡುತ್ತದೆ. ಇದನ್ನು ಶೇ. 30ಕ್ಕೆ ಇಳಿಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ. ಕೇಂದ್ರದಿಂದ ಉತ್ತರ ಬಂದಿಲ್ಲ ಹಾಗೂ ವಿಶೇಷ ಅನುದಾನಕ್ಕೆ ಕೇಂದ್ರಕ್ಕೆ ಮನವಿ ಮಾಡಿಲ್ಲ. ಬರ ಹಾಗೂ ನೀರಿನ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳ ಬಳಿ ವರದಿ ಕೇಳಿದ್ದೇವೆ. ಆನಂತರ ಪರಿಸ್ಥಿತಿ ನೋಡಿ ಬರ ಘೋಷಣೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು.

ಕುಮಾರಸ್ವಾಮಿ ಬಗ್ಗೆ ಮಾತನಾಡುವುದಿಲ್ಲ : ಗುತ್ತಿಗೆದಾರರಿಂದ ಸಚಿವರು ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಕೇಳುತ್ತಿದ್ದಂತೆ ಅಯ್ಯೋ ಬಿಡಪ್ಪ ಕೆಲಸ ಇಲ್ಲದವರು ಏನೇನೋ ಮಾತನಾಡುತ್ತಾರೆ. ಹಿಂದಿನ ಸರ್ಕಾರದವರು ಒಂದು ವರ್ಷ ಪೇಮೆಂಟ್ ಕೊಟ್ಟಿರಲಿಲ್ಲ. ನಾವು ಬಂದು ಎರಡು ತಿಂಗಳಾಯಿತು. ಈಗಲೇ ಅಷ್ಟು ಅನುದಾನ ಕೊಡಲು ಆಗುವುದಿಲ್ಲ. ಕೆಲವರು ಬಾಯಿ ಚಪಲಕ್ಕೆ ಏನೇನೋ ಮಾತನಾಡುತ್ತಾರೆ, ಅವರಿಗೆಲ್ಲ ಉತ್ತರ ಕೊಡಲು ಆಗುವುದಿಲ್ಲ. ಇನ್ನು ಮುಂದೆ ಕುಮಾರಸ್ವಾಮಿ ಸೇರಿದಂತೆ ಯಾರ ಬಗ್ಗೆಯೂ ಮಾತನಾಡುವುದಿಲ್ಲ. ಯಾರ ಹೇಳಿಕೆಯ ಕುರಿತು ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು.

andolanait

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

2 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

4 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

6 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

6 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

6 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

6 hours ago