ಉತ್ತರಾಖಂಡ್ : ಇತ್ತೀಚೆಗಷ್ಟೇ ಮುಸ್ಲಿಂ ಯುವಕನ ಜೊತೆ ಬಿಜೆಪಿ ಮುಖಂಡನ ಮಗಳ ಮದುವೆಗೆ ಸಂಬಂಧಿಸಿದ ಸುದ್ದಿ ಭಾರೀ ವೈರಲ್ ಆಗಿತ್ತು. ಇದೀಗ ಭಾರೀ ಟೀಕೆಗೆ ಕಾರಣವಾಗಿರುವುದರಿಂದ ತನ್ನ ಮಗಳ ಮದುವೆಯನ್ನು ರದ್ದುಗೊಳಿಸಲಾಗಿದೆ ಎಂದು ಬಿಜೆಪಿ ಮುಖಂಡ ತಿಳಿಸಿದ್ದಾರೆ.
ಉತ್ತರಾಖಂಡದಲ್ಲಿ ಬಿಜೆಪಿ ಮುಖಂಡ ಹಾಗೂ ನಗರಸಭೆ ಅಧ್ಯಕ್ಷ ಯಶಪಾಲ್ ಬೇನಂ ಅವರ ಪುತ್ರಿ ಮೋನಿಕಾ ಅವರ ಮದುವೆ ಮೇ 28 ರಂದು ರೈಸ್ ಅಹ್ಮದ್ ಅವರ ಮಗ ಮೋನಿಸ್ ಅಹ್ಮದ್ ಅವರೊಂದಿಗೆ ನಡೆಯಬೇಕಿತ್ತು. ಮದುವೆಗೆ ಸಂಬಂಧಿಸಿದಂತೆ ಲಗ್ನ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಲಗ್ನ ಪತ್ರಿಕೆ ಎಲ್ಲೆಡೆ ಹರಿದಾಡುತ್ತಿದ್ದಂತೆ ಈ ಮದುವೆಗೆ ಹಲವು ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಯಶ್ಪಾಲ್ ಬೇನಾಮ್ ಪಕ್ಷದ ಅನೇಕರು ಮದುವೆ ನಿಲ್ಲಿಸುವಂತೆ ಒತ್ತಾಯಿಸಿದ್ದರು.
ವಿವಾದ ವಿರೋಧಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದೇ ತಿಂಗಳು 28 ರಂದು ನಡೆಯಬೇಕಿದ್ದ ಮದುವೆಗೆ ತೆರೆಬಿದ್ದಿದೆ.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಯಶ್ಪಾಲ್ ಬೇನಮ್, ಮಗಳ ಸಂತೋಷಕ್ಕಾಗಿ ಮುಸ್ಲಿಂ ಯುವಕನೊಂದಿಗೆ ಮದುವೆ ಮಾಡಲು ಒಪ್ಪಿಕೊಂಡಿದ್ದೇನೆ. ಆದರೆ ಮದುವೆಗೆ ಸಾಮಾಜಿಕ ಮಾಧ್ಯಮ ಬಳಕೆದಾರರು ಪ್ರತಿಕ್ರಿಯಿಸಿದ ರೀತಿಯನ್ನು ಗಮನದಲ್ಲಿಟ್ಟುಕೊಂಡು ಮದುವೆ ನಿಲ್ಲಿಸಲಾಗಿದೆ. ಈಗ ನಾನು ಸಾರ್ವಜನಿಕರ ಧ್ವನಿಯನ್ನೂ ಕೇಳಬೇಕಾಗಿದೆ ಎಂದು ಬೇನಾಮ್ ಹೇಳಿದ್ದಾರೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…