BREAKING NEWS

60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ: ಆರೋಗ್ಯ ಸಚಿವ ಗುಂಡೂರಾವ್‌

ಕೊಡಗು : ನೆರೆಯ ರಾಜ್ಯಗಳಲ್ಲಿ ಮಹಾಮಾರಿ ಕೊರೊನಾ ಉಪಟಳ ಹೆಚ್ಚಾಗಿದ್ದು, ರಾಜ್ಯದಲ್ಲಿಯೂ ಕೊರೊನಾ ರೂಪಾಂತರ ತಳಿ ಕಂಡುಬಂದಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ 60 ವರ್ಷದ ಮೇಲ್ಪಟ್ಟವರೆಲ್ಲರೂ ಮಾಸ್ಕ್‌ ಬಳಸುವಂತೆ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕುಶಾಲ ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ರೂಪಾಂತರ ತಳಿ ಬಗ್ಗೆ ಯಾರು ಭಯಪಡಬೇಕಾಗಿಲ್ಲ. ಈ ಬಗ್ಗೆ ಒಂದು ಸುತ್ತಿನ ಸಭೆ ನಡೆಸಲಾಗಿದ್ದು, ಕೋವಿಡ್ ವಿಚಾರವಾಗಿ ಮುಂಜಾಗ್ರತ ಕ್ರಮಗಳ ಬಗ್ಗೆ ಇಲಾಖೆಯಿಂದ ಇಂದು ಮಾರ್ಗಸೂಚಿ ಹೊರಡಿಸಲಾಗುವುದು. ನೆನ್ನೆಯೆ ಡಾ. ರವಿ ನೇತೃತ್ವದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದು, ಕೆಲವು ಸಲಹೆಗಳನ್ನು ಪಡೆಯಲಾಗಿದೆ. 60 ವರ್ಷ ಮೇಲ್ಪಟ್ಟವರು, ಕಫ, ಜ್ವರ, ಕಿಡ್ನಿ ಸಮಸ್ಯೆ, ಉಸಿರಾಟ ತೊಂದರೆ, ಹೃದಯ ಸಂಬಂಧಿ ಕಾಯಿಲೆ ಇರುವವರು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಎಂದು ಸಮಿತಿ ಸಲಹೆ ನೀಡಿದೆ. ಸಮಿತಿ ಸಲಹೆಗಳನ್ನಾಧರಿಸಿ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

ಹೆಚ್ಚು ಟೆಸ್ಟಿಂಗ್ ಮಾಡುವಂತೆ ಆರೋಗ್ಯ ಇಲಾಖೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಹೆಚ್ಚು ಪಾಸಿಟಿವ್ ಬಂದರೆ ಮಾತ್ರ ಸಾರ್ವಜನಿಕ ಸ್ಥಳಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಳ್ಳುವುದು ಅನಿವಾರ್ಯವಾಗಲಿದೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ ಅಗತ್ಯವಿರುವ ಬೆಡ್, ಪಿಪಿಇ ಕಿಟ್, ಸನ್ನದ್ದ ಸ್ಥಿತಿಯಲ್ಲಿ ಇರಿಸಿಕೊಳ್ಳಲು ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಿಳಿಸಲಾಗಿದೆ.

ಕೇರಳ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದು ಬರುವವರಿಗೆ ಕೋವಿಡ್‌ ಟೆಸ್ಟ್‌ ಕಡ್ಡಾಯಗೊಳಿಸಲಾಗಿದೆ ಎಂದರು.

andolanait

Recent Posts

ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡ ಮೈಸೂರಿಗರು

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್‌ ಬ್ಯಾಂಡ್‌ನ ಸದ್ದಿನೊಂದಿಗೆ…

55 mins ago

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಕಾಫಿ ಪುಡಿ ಅಂಗಡಿ ಬೆಂಕಿಗಾಹುತಿ

ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…

1 hour ago

ಮೈಸೂರು, ಚಾ.ನಗರ, ಮಂಡ್ಯ, ಕೊಡಗು ಎಸ್‌ಪಿಗಳ ವರ್ಗ

ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…

2 hours ago

ಕೊಡಗು ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ನೇಮಕ

ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್‌ ವರಿಷ್ಠಾಧಿಕಾರಿ ರಾಮರಾಜನ್‌ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…

2 hours ago

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

5 hours ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

5 hours ago