ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಕಟ್ಟಿ ಹಾಕಲು ವಿರೋಧ ಪಕ್ಷಗಳು ತಮ್ಮ ಶಕ್ತಿ ಪ್ರದರ್ಶಿಸಲು ಮುಂದಾಗಿದೆ. ಪಾಟ್ನಾ ಸಭೆ ಬಳಿಕ ಬೆಂಗಳೂರಿನಲ್ಲಿ ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ಮಹತ್ವದ ಸಭೆ ನಡೆಯಲಿದೆ.
ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಸಭಯಲ್ಲಿ ೧೫ ವಿವಿಧ ಪಕ್ಷಗಳು ಹಾಜರಾಗಿದ್ದವು. ಈ ಬಾರಿ ಇನ್ನೂ ೯ ಪಕ್ಷಗಳು ಸೇರಿ ೨೪ ಹೆಚ್ಚು ಪಕ್ಷಗಳು ಭಾಗವಹಿಸುವ ನಿರೀಕ್ಷೆ ಇದೆ. ಸಾರ್ವತ್ರಿಕ ಚುನಾವಣೆಗೆ ರಣನೀತಿ ರೂಪಿಸಲು ಮುಂದಾಗಿರುವುದು ಕುತೂಹಲಕ್ಕೆಡೆ ಮಾಡಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಟೇ ಸೋನಿಯಾ ಗಾಂಧಿ ಅವರ ಸಮ್ಮುಖದಲ್ಲಿ ಸಭೆ ನಡೆಯುತ್ತಿದೆ ಎರಡು ದಿನಗಳ ಸಭೆ ಮುಂಬರುವ ಲೋಕಸಭಾ ಚುನಾವಣೆಯ ಸೀಟು ಹಂಚಿಕೆ, ಹೊಂದಾಣಿಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಗಳಿವೆ
ಸಿಎಂ ಔತಣ ಕೂಟ: ಸಭೆಯ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಖಾಸಗಿ ಹೋಟೆಲ್‌ನಲ್ಲಿ ನಾಳೆ ರಾತ್ರಿ ಔತಣಕೂಟ ಆಯೋಜಿಸಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷದ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆದರೆ, ಔತಣಕೂಟದಲ್ಲಿ ಮಾತ್ರ ಪಾಲ್ಗೊಳ್ಳುವುದಿಲ್ಲ ಎಂದು ಹೇಳಲಾಗಿದೆ.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಜುಲೈ ೧೮ ರಂದು ನಡೆದ ಸಭೆ ನಡೆಯಲಿದೆ. ಔತಣಕೂಟದಲ್ಲಿ ೨೦ಕ್ಕೂ ಪ್ರತಿಪಕ್ಷಗಳ ಎಲ್ಲಾ ಪ್ರಮುಖ ನಾಯಕರು ಉಪಸ್ಥಿತರಿರಲಿದ್ದಾರೆ ಎನ್ನಲಾಗಿದೆ.
ಜೂನ್ ೨೩ರಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಪಾಟ್ನಾದಲ್ಲಿ ಮೊದಲ ಪ್ರತಿಪಕ್ಷ ಸಭೆ ನಡೆದಿತ್ತು. ಅದರ ನಂತರ, ಪ್ರತಿ ಪಕ್ಷಗಳು ಜುಲೈ ೧೭ ಮತ್ತು ೧೮ ರಂದು ಎರಡು ದಿನಗಳ ಸಭೆ ನಡೆಸಲಿದ್ದು, ಮೊದಲು ಶಿಮ್ಲಾದಲ್ಲಿ ಮತ್ತು ನಂತರ ಬೆಂಗಳೂರಿನಲ್ಲಿ ನಡೆಯಲಿದೆ.
ಮಮತಾ ಬ್ಯಾನರ್ಜಿ ಶಸ್ತ್ರಚಿಕಿತ್ಸೆ: ಮುಖ್ಯಮಂತ್ರಿಯ ಮಮತಾ ಬ್ಯಾನರ್ಜಿ ಶಸ್ತ್ರಚಿಕಿತ್ಸೆಯ ನಂತರ ಅನುಸರಿಸಬೇಕಾದ ಹಲವಾರು ನಿಯಮಗಳ ಹಿನ್ನೆಲೆಯಲ್ಲಿ ಔತಣಕೂಟದಲ್ಲಿ ಗೈರುಹಾಜರಾಗಲಿದೆ. ಆದರೆ, ಜುಲೈ ೧೮ರಂದು ದಿನಪೂರ್ತಿ ನಡೆಯುವ ಸಭೆಯಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ.
ಜೂನ್ ೨೭ ರಂದು, ಉತ್ತರ ಬಂಗಾಳದ ಸೇವಕ್ ಏರ್‌ಬೇಸ್‌ನಲ್ಲಿ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್ ಸಮಯದಲ್ಲಿ ಮಮತಾ ಬ್ಯಾನರ್ಜಿ ಅವರ ಎಡ ಮೊಣಕಾಲಿಗೆ ಗಾಯವಾಗಿತ್ತು. ಆ ನಂತರ ಎಸ್‌ಎಎಸ್‌ಕೆಎಂ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿಯವರ ಎಡ ಮೊಣಕಾಲಿಗೆ ಮೈಕ್ರೋಸರ್ಜರಿ ಕೂಡ ಮಾಡಲಾಯಿತು.
ಮೊಣಕಾಲಿನ ಗಾಯದಿಂದಾಗಿ ಮಮತಾ ಅವರು ಪಂಚಾಯತ್ ಚುನಾವಣೆಯ ಪ್ರಚಾರಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಆದರೆ, ಮುಖ್ಯಮಂತ್ರಿಗೆ ವಿಮಾನ ಹತ್ತಲು ಹಾಗೂ ವಿರೋಧ ಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲು ವೈದ್ಯರು ಅನುಮತಿ ನೀಡಿದ್ದಾರೆ ಎಂದು ತೃಣಮೂಲ ಮೂಲಗಳು ತಿಳಿಸಿವೆ.
ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…