BREAKING NEWS

ಬೆಂಗಳೂರಿನಲ್ಲಿ ನಾಳೆಯಿಂದ ಎರಡು ದಿನ ವಿಪಕ್ಷಗಳ ಸಭೆಗೆ ಭರ್ಜರಿ ತಯಾರಿ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಕಟ್ಟಿ ಹಾಕಲು ವಿರೋಧ ಪಕ್ಷಗಳು ತಮ್ಮ ಶಕ್ತಿ ಪ್ರದರ್ಶಿಸಲು ಮುಂದಾಗಿದೆ. ಪಾಟ್ನಾ ಸಭೆ ಬಳಿಕ ಬೆಂಗಳೂರಿನಲ್ಲಿ ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ಮಹತ್ವದ ಸಭೆ ನಡೆಯಲಿದೆ.

ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಸಭಯಲ್ಲಿ ೧೫ ವಿವಿಧ ಪಕ್ಷಗಳು ಹಾಜರಾಗಿದ್ದವು. ಈ ಬಾರಿ ಇನ್ನೂ ೯ ಪಕ್ಷಗಳು ಸೇರಿ ೨೪ ಹೆಚ್ಚು ಪಕ್ಷಗಳು ಭಾಗವಹಿಸುವ ನಿರೀಕ್ಷೆ ಇದೆ. ಸಾರ್ವತ್ರಿಕ ಚುನಾವಣೆಗೆ ರಣನೀತಿ ರೂಪಿಸಲು ಮುಂದಾಗಿರುವುದು ಕುತೂಹಲಕ್ಕೆಡೆ ಮಾಡಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಟೇ ಸೋನಿಯಾ ಗಾಂಧಿ ಅವರ ಸಮ್ಮುಖದಲ್ಲಿ ಸಭೆ ನಡೆಯುತ್ತಿದೆ ಎರಡು ದಿನಗಳ ಸಭೆ ಮುಂಬರುವ ಲೋಕಸಭಾ ಚುನಾವಣೆಯ ಸೀಟು ಹಂಚಿಕೆ, ಹೊಂದಾಣಿಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಗಳಿವೆ

ಸಿಎಂ ಔತಣ ಕೂಟ: ಸಭೆಯ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಖಾಸಗಿ ಹೋಟೆಲ್‌ನಲ್ಲಿ ನಾಳೆ ರಾತ್ರಿ ಔತಣಕೂಟ ಆಯೋಜಿಸಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷದ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆದರೆ, ಔತಣಕೂಟದಲ್ಲಿ ಮಾತ್ರ ಪಾಲ್ಗೊಳ್ಳುವುದಿಲ್ಲ ಎಂದು ಹೇಳಲಾಗಿದೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಜುಲೈ ೧೮ ರಂದು ನಡೆದ ಸಭೆ ನಡೆಯಲಿದೆ. ಔತಣಕೂಟದಲ್ಲಿ ೨೦ಕ್ಕೂ ಪ್ರತಿಪಕ್ಷಗಳ ಎಲ್ಲಾ ಪ್ರಮುಖ ನಾಯಕರು ಉಪಸ್ಥಿತರಿರಲಿದ್ದಾರೆ ಎನ್ನಲಾಗಿದೆ.

ಜೂನ್ ೨೩ರಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಪಾಟ್ನಾದಲ್ಲಿ ಮೊದಲ ಪ್ರತಿಪಕ್ಷ ಸಭೆ ನಡೆದಿತ್ತು. ಅದರ ನಂತರ, ಪ್ರತಿ ಪಕ್ಷಗಳು ಜುಲೈ ೧೭ ಮತ್ತು ೧೮ ರಂದು ಎರಡು ದಿನಗಳ ಸಭೆ ನಡೆಸಲಿದ್ದು, ಮೊದಲು ಶಿಮ್ಲಾದಲ್ಲಿ ಮತ್ತು ನಂತರ ಬೆಂಗಳೂರಿನಲ್ಲಿ ನಡೆಯಲಿದೆ.

ಮಮತಾ ಬ್ಯಾನರ್ಜಿ ಶಸ್ತ್ರಚಿಕಿತ್ಸೆ: ಮುಖ್ಯಮಂತ್ರಿಯ ಮಮತಾ ಬ್ಯಾನರ್ಜಿ ಶಸ್ತ್ರಚಿಕಿತ್ಸೆಯ ನಂತರ ಅನುಸರಿಸಬೇಕಾದ ಹಲವಾರು ನಿಯಮಗಳ ಹಿನ್ನೆಲೆಯಲ್ಲಿ ಔತಣಕೂಟದಲ್ಲಿ ಗೈರುಹಾಜರಾಗಲಿದೆ. ಆದರೆ, ಜುಲೈ ೧೮ರಂದು ದಿನಪೂರ್ತಿ ನಡೆಯುವ ಸಭೆಯಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ.

ಜೂನ್ ೨೭ ರಂದು, ಉತ್ತರ ಬಂಗಾಳದ ಸೇವಕ್ ಏರ್‌ಬೇಸ್‌ನಲ್ಲಿ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್ ಸಮಯದಲ್ಲಿ ಮಮತಾ ಬ್ಯಾನರ್ಜಿ ಅವರ ಎಡ ಮೊಣಕಾಲಿಗೆ ಗಾಯವಾಗಿತ್ತು. ಆ ನಂತರ ಎಸ್‌ಎಎಸ್‌ಕೆಎಂ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿಯವರ ಎಡ ಮೊಣಕಾಲಿಗೆ ಮೈಕ್ರೋಸರ್ಜರಿ ಕೂಡ ಮಾಡಲಾಯಿತು.

ಮೊಣಕಾಲಿನ ಗಾಯದಿಂದಾಗಿ ಮಮತಾ ಅವರು ಪಂಚಾಯತ್ ಚುನಾವಣೆಯ ಪ್ರಚಾರಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಆದರೆ, ಮುಖ್ಯಮಂತ್ರಿಗೆ ವಿಮಾನ ಹತ್ತಲು ಹಾಗೂ ವಿರೋಧ ಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲು ವೈದ್ಯರು ಅನುಮತಿ ನೀಡಿದ್ದಾರೆ ಎಂದು ತೃಣಮೂಲ ಮೂಲಗಳು ತಿಳಿಸಿವೆ.

andolanait

Recent Posts

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

4 mins ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

41 mins ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

50 mins ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

4 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

4 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

4 hours ago