BREAKING NEWS

ದೇಶದ ಮೊದಲ ಶಿಕ್ಷಣ ಮಂತ್ರಿ ಮೌಲಾನಾ ಅಬುಲ್‌ ಕಲಾಂ ಆಜಾದ್‌ ಉಲ್ಲೇಖ ಕೈಬಿಟ್ಟ NCERT

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಮತ್ತು ಭಾರತದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್ ಅವರಿಗೆ ಸಂಬಂಧಿಸಿದ ಉಲ್ಲೇಖಗಳನ್ನು 11 ನೇ ತರಗತಿಯ ಹೊಸ ರಾಜ್ಯಶಾಸ್ತ್ರ ಪಠ್ಯಪುಸ್ತಕದಿಂದ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ತೆಗೆದುಹಾಕಿದೆ.

ಕಳೆದ ವರ್ಷ ತನ್ನ ‘ಪಠ್ಯ ತರ್ಕಬದ್ಧಗೊಳಿಸುವ ಕಾರ್ಯ ನಡೆಸಿರುವ ಎನ್‌ಸಿಇಆರ್‌ಟಿ, ಅಪ್ರಸ್ತುತ ಮತ್ತು ವ್ಯಾಪ್ತಿಮೀರಿದ ವಿಷಯ ಎಂಬ ಕಾರಣ ನೀಡಿ ಗುಜರಾತ್ ಗಲಭೆಗಳು, ಮೊಘಲ್ ಯುಗ, ತುರ್ತು ಪರಿಸ್ಥಿತಿ, ಶೀತಲ ಸಮರ, ನಕ್ಸಲ್‌ ಚಳವಳಿಯೂ ಸೇರಿದಂತೆ ಹಲವು ವಿಷಯಗಳನ್ನು ಪಠ್ಯದಿಂದ ಕೈ ಬಿಟ್ಟಿದೆ.

ಆದರೆ, ತರ್ಕಬದ್ಧಗೊಳಿಸುವಿಕೆಯ ಟಿಪ್ಪಣಿಯಲ್ಲಿ 11 ನೇ ತರಗತಿಯ ರಾಜ್ಯಶಾಸ್ತ್ರ ಪಠ್ಯಪುಸ್ತಕದಲ್ಲಾದ ಬದಲಾವಣೆಗಳ ಉಲ್ಲೇಖವಿಲ್ಲ.

ಈ ವರ್ಷ ಯಾವುದೇ ಪಠ್ಯಕ್ರಮವನ್ನು ಪರಿಷ್ಕರಣೆ ಮಾಡಿಲ್ಲ. ಕಳೆದ ವರ್ಷ ಜೂನ್‌ನಲ್ಲಿ ಪಠ್ಯಕ್ರಮವನ್ನು ತರ್ಕಬದ್ಧಗೊಳಿಸಲಾಗಿದೆ ಎಂದು ಎನ್‌ಸಿಇಆರ್‌ಟಿ ಹೇಳಿಕೊಂಡಿದೆ.

‘ತರ್ಕಬದ್ಧಗೊಂಡ ಪುಸ್ತಕದಲ್ಲಿ ಬದಲಾವಣೆಗಳನ್ನು ಉಲ್ಲೇಖಿಸದಿರುವುದು ಮೇಲ್ವಿಚಾರಣೆ ಕೊರತೆಯಿಂದ ಆಗಿದ್ದಿರಬಹುದು’ ಎಂದು ಎನ್‌ಸಿಇಆರ್‌ಟಿ ನಿರ್ದೇಶಕ ದಿನೇಶ್ ಸಕ್ಲಾನಿ ತಿಳಿಸಿದ್ದಾರೆ.

11 ನೇ ತರಗತಿಯ ರಾಜ್ಯಶಾಸ್ತ್ರ ಪಠ್ಯಪುಸ್ತಕದ ಮೊದಲ ಅಧ್ಯಾಯದಲ್ಲಿದ್ದ ‘ಸಂವಿಧಾನ – ಏಕೆ ಮತ್ತು ಹೇಗೆ’ ಎಂಬ ಶೀರ್ಷಿಕೆಯ ಪಾಠದಲ್ಲಿದ್ದ ಸಂವಿಧಾನದ ಶಾಸನ ಸಮಿತಿಗೆ ಸಂಬಂಧಿಸಿದ ಭಾಗದಲ್ಲಿದ್ದ ವಾಕ್ಯವೊಂದನ್ನು ಪರಿಷ್ಕರಣೆ ಮಾಡಲಾಗಿದ್ದು, ಆಜಾದ್ ಅವರ ಹೆಸರನ್ನು ತೆಗೆದು ಹಾಕಲಾಗಿದೆ.

ಪರಿಷ್ಕೃತ ಸಾಲಿನಲ್ಲಿ, ‘ಸಾಮಾನ್ಯವಾಗಿ, ಜವಾಹರಲಾಲ್ ನೆಹರು, ರಾಜೇಂದ್ರ ಪ್ರಸಾದ್, ಸರ್ದಾರ್ ಪಟೇಲ್ ಅಥವಾ ಬಿ.ಆರ್ ಅಂಬೇಡ್ಕರ್ ಈ ಸಮಿತಿಗಳ ಅಧ್ಯಕ್ಷರಾಗಿದ್ದರು’ ಎಂದು ಮಾಡಲಾಗಿದೆ.

ಅದೇ ಪಠ್ಯಪುಸ್ತಕದ ಹತ್ತನೇ ಅಧ್ಯಾಯದ ‘ಸಂವಿಧಾನದ ತತ್ವಶಾಸ್ತ್ರ’ ಎಂಬ ಶೀರ್ಷಿಕೆಯ ಪಾಠದಲ್ಲಿ ಜಮ್ಮು ಮತ್ತು ಕಾಶ್ಮೀರದ ಷರತ್ತುಬದ್ಧ ಸೇರ್ಪಡೆಯ ಉಲ್ಲೇಖವನ್ನು ಸಹ ಅಳಿಸಲಾಗಿದೆ.

‘ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ಸ್ವಾಯತ್ತತೆಯನ್ನು ಕಾಪಾಡುವ ಬದ್ಧತೆಯ ಆಧಾರದಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ಭಾರತೀಯ ಒಕ್ಕೂಟಕ್ಕೆ ಸೇರಿಸಲಾಯಿತು’ ಎಂದು ಈ ಹಿಂದೆ ವಿವರಿಸಲಾಗಿತ್ತು.

2009ರಲ್ಲಿ ಪ್ರಾರಂಭಿಸಲಾಗಿದ್ದ ಮೌಲಾನಾ ಆಜಾದ್ ಫೆಲೋಶಿಪ್ ಅನ್ನು ಕಳೆದ ವರ್ಷ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಸ್ಥಗಿತಗೊಳಿಸಿತ್ತು. ಈ ಫೆಲೋಶಿಪ್‌ ಅಡಿಯಲ್ಲಿ ಆರು ಅನುಸೂಚಿತ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಐದು ವರ್ಷಗಳವರೆಗೆ ಹಣಕಾಸಿನ ನೆರವು ನೀಡಲಾಗುತ್ತಿತ್ತು.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago