ಹೊಸ ದಿಲ್ಲಿ: ಕೊರೊನಾ ವೈರಸ್ ಹೊಸ ಅಲೆಯ ಸಾಧ್ಯತೆಯ ಆತಂಕವನ್ನು ವಿಶ್ವ ಆರೋಗ್ಯ ಸಂಸ್ಥೆ ಹೊರಹಾಕಿದೆ. ಈ ಕುರಿತಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್, ಕೆಲವು ದೇಶಗಳು ಕೋವಿಡ್ ಹೊಸ ಅಲೆಯನ್ನು ಎದುರಿಸಬೇಕಾಗಿ ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಅದೂ ಕೂಡಾ ಓಮಿಕ್ರಾನ್‌ನ ಉಪ ರೂಪಾಂತರಿ ತಳಿ ಎಕ್ಸ್‌ಬಿಬಿ ವೈರಸ್‌ನಿಂದ ಹೊಸ ಅಲೆ ಸೃಷ್ಟಿಯಾಗುವ ಆತಂಕವನ್ನು ಅವರು ಹೊರ ಹಾಕಿದ್ದಾರೆ.
ಓಮಿಕ್ರಾನ್ ವೈರಾಣು ಈಗಾಗಲೇ 300ಕ್ಕೂ ಹೆಚ್ಚು ಉಪ ರೂಪಾಂತರಿಗಳನ್ನು ಸೃಷ್ಟಿಸಿದೆ. ಆದರೆ ಈ ಎಲ್ಲ ಉಪ ರೂಪಾಂತರಿಗಳಿಗಳ ಪೈಕಿ ಎಕ್ಸ್‌ಬಿಬಿ ವೈರಾಣು ಅಪಾಯಕಾರಿ ಆಗಬಲ್ಲದು ಎಂದು ವಿಶ್ವ ಆರೋಗ್ಯ ಸಂಸ್ಥೆ ಅಂದಾಜಿಸಿದೆ. ಏಕೆಂದರೆ ಇದು ಮಿಶ್ರ ತಳಿಯ ವೈರಾಣು ಆಗಿದ್ದು, ಬೇರೆ ರೀತಿಯ ಸಂಯೋಜನೆ ಹೊಂದಿದೆ. ಈ ರೀತಿಯ ಹಲವು ತಳಿಗಳು ಈಗಾಗಲೇ ಪತ್ತೆಯಾಗಿವೆ. ಈ ವೈರಣು ಅತಿ ಸುಲಭವಾಗಿ ರೋಗ ನಿರೋಧಕ ಶಕ್ತಿಯನ್ನು ಭೇದಿಸುವ ಸಾಮರ್ಥ್ಯ ಹೊಂದಿವೆ.
ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್ ವಸತಿ ಕಲ್ಪಿಸಬೇಕು ಎಂದು ಶಾಸಕ…
ಸ್ವಿಟ್ಜರ್ಲೆಂಡ್: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.…
ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದೇ ದಿನ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ…
ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಿದೆ. 2026ರ ಜನವರಿ.1ರಿಂದ ಮುಂದಿನ ಆರು…
ಬೆಂಗಳೂರು: ಹೈಕಮಾಂಡ್ ತೀರ್ಮಾನಿಸಿದರೆ ರಾಜಕೀಯ ಪದೋನ್ನತಿ ಆಗುತ್ತದೆ. ಎಲ್ಲರ ರೀತಿಯಲ್ಲಿ ನನಗೂ ಆಕಾಂಕ್ಷೆ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್…
ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್ ತೆರವಿನ ಹಿನ್ನೆಲೆಯಲ್ಲಿ ಮನೆ ಕೊಡಲು ರಾಜ್ಯ ಸರ್ಕಾರ ಮುಂದಾಗಿದ್ದು, ನಿರಾಶ್ರಿತರಿಗೆ ನಾಳೆಯೇ ಜಿಬಿಎ,…