BREAKING NEWS

ಶ್ರೀಕಂಠೇಶ್ವರ ಪಂಚಮಹಾರಥೋತ್ಸವ ವಿಜೃಂಭಣೆಯಿಂದ ಆಗಲಿ – ದರ್ಶನ್ ಧ್ರುವನಾರಾಯಣ್‌

ನಂಜನಗೂಡು : ದಕ್ಷಿಣಕಾಶಿ ಪ್ರಖ್ಯಾತಿಯ ನಂಜನಗೂಡು ಶ್ರೀ ನಂಜುಂಡೇಶ್ವರನ ಜಾತ್ರಾ ಮಹೋತ್ಸಮಮಾರ್ಚ್ 22 ರಂದು ಜರುಗಲಿದ್ದು ಜಾತ್ರೆ ಯಶಸ್ಸಿಗೆ ಸುತ್ತಲಿನ ಏಳು ಹಳ್ಳಿ ಗ್ರಾಮಸ್ಥರು, ವಿವಿಧ ಇಲಾಖೆಗಳ ಅಧಿಕಾರಿಗಳು ಸಹಕರಿಸಬೇಕೆಂದು ನಂಜನಗೂಡು ಶಾಸಕರಾದ ದರ್ಶನ್ ಧೃವನಾರಾಯಣ್ ಹೇಳಿದರು.

ನಂಜನಗೂಡು ದೇವಾಲಯದ ದಾಸೋಹ ಭವನದಲ್ಲಿ ನಡೆದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿವರ್ಷ ನಡೆಯುವ ವೈಭವದ ಜಾತ್ರೆಗೆ ಹೊರರಾಜ್ಯ ಹಾಗೂ ಹೊರದೇಶಗಳಿಂದ ಲಕ್ಷಾಂತರ ಭಕ್ತಾಧಿಗಳು ಆಗಮಿಸುತಿದ್ದು ಅವರುಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದರೊಂದಿಗೆ ರಕ್ಷಣೆಯ ಜವಾಬ್ದಾರಿಯು ನಮ್ಮ ಮೇಲಿದೆ ಎಂದರು.

ನಗರದ ರಸ್ತೆಗಳು, ವಿದ್ಯುತ್ ದೀಪಗಳು, ಜನಸಂದಣಿ ನಿಯಂತ್ರಿಸುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದ್ದು, ಜನ ಸ್ನಾನಕ್ಕೆ ಇಳಿಯುವಲ್ಲಿ ಜಾಗ್ರತೆ ವಹಿಸುವುದು, ಮಕ್ಕಳು ಪೋಷಕರಿಂದ ತಪ್ಪಿಸಿಕೊಳ್ಳದಂತೆ ಮುಂಜಾಗ್ರತೆ ವಹಿಸಬೇಕು ಎಂದರು.

ಜಿಲ್ಲಾಧಿಕಾರಿ ಡಾ.ರಾಜೇಂದ್ರ ಮಾತನಾಡಿ, ಬಹಳ ಜನಸಂದಣಿ ಸೇರುವ ಜಾತ್ರಾ ಮಹೋತ್ಸವ ಇದಾಗಿದ್ದು, ಅನಧಿಕೃತ ವ್ಯಕ್ತಿಗಳ ಬಗೆಗೆ ಎಚ್ಚರಿಕೆಯಿಂದಿರಬೇಕು, ದೊಡ್ಡ ತೇರು ಎಳೆಯುವಾಗ ಜಾಗ್ರತೆ ಬಹಳ ಮುಖ್ಯ. ಏಳು ಗ್ರಾಮದ ಗ್ರಾಮಸ್ಥರ ಸಹಕಾರವು ಮುಖ್ಯವಾಗಿದ್ದು, ಆ ಸಂದರ್ಭದಲ್ಲಿ ಜಾಗರೂಕತೆ ಬಹಳ ಮುಖ್ಯ. ಮಹಿಳೆಯರು,ಮಕ್ಕಳು ಹಾಗೂ ಅವರ ಆಭರಣಗಳ ಬಗೆಗೆ ಎಚ್ಚರ ವಹಿಸಿ ಎಂದರು.

ಚೆಸ್ಕಾಂ ನವರು ಅನಿಯಂತ್ರಿತ ವಿದ್ಯುತ್ ಸರಬರಾಜಿನೊಂದಿಗೆ ವರಣರಂಜಿತ ದೀಪಾಲಂಕಾರ ಮಾಡುವುದು ಮತ್ತು ವಿವಿಧ ಇಲಾಖೆಯವರು ತಮ್ಮ ಕಟ್ಟಡಗಳ ಮೇಲೆ ದೀಪಾಲಂಕಾರ ಮಾಡುವುದರೊಂದಿಗೆ ಜಾತ್ರಾ ರಂಗನ್ನು ಹೆಚ್ಚುವಂತೆ ನೋಡಿಕೊಳ್ಳಿ ಎಂದರು.

ದೇವಸ್ಥಾನದ ಸುತ್ತಮುತ್ತ ಸಿಸಿಟಿವಿ ಕ್ಯಾಮರಾ ಅಳವಡಿಸುವುದರೊಂದಿಗೆ ಸ್ವಚ್ಚತೆ,ಭದ್ರತಾ ಸಿಬ್ಬಂದಿ ಎಲ್ಲಾ ವ್ಯವಸ್ಥೆಗಳನ್ನು ಮಾಡುವುದು.

ಶಕ್ತಿ ಯೋಜನೆ ಹಿನ್ನೆಲೆ ಮಹಿಳಾ ಭಕ್ತರ ಸಂಖ್ಯೆ ಹೆಚ್ಚಾಗುವ ಕಾರಣ ಕೆ.ಎಸ್.ಆರ್.ಟಿ.ಸಿ ವತಿಯಿಂದ ಹೆಚ್ಚಿನ ಬಸ್‌ ವ್ಯವಸ್ಥೆ ಮಾಡಿ, ನಂಜನಗೂಡು ಡಿಪೋ ಅಷ್ಟನ್ನೆ ನೆಚ್ಚಿಕೊಳ್ಳದೆ ಅಕ್ಕಪಕ್ಕದ ಡಿಪೋಗಳಿಂದ ಬಸ್ ತರಿಸಿ, ವಾಹನ ಪಾರ್ಕಿಂಗ್, ಸೂಚನಾ ಫಲಕಗಳು ವ್ಯವಸ್ಥಿತವಾಗಿರಲಿ ಎಂದರು.

ಸಭೆಯಲ್ಲಿ ಜಿ.ಪಂ ಉಪಕಾರ್ಯದರ್ಶಿ ಕೃಷ್ಣಂ ರಾಜು, ಅಡಿಷನಲ್ ಎಸ್ಪಿ ಬಾಬು, ಏಳು ಹಳ್ಳಿಗಳ ಯಜಮಾನರು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು

andolana

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

11 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

12 hours ago