ಖ್ಯಾತ ಬರ್ಗರ್ ಕಂಪನಿ ಮೆಕ್‌ಡೊನಾಲ್ಡ್ಸ್ ತನ್ನ ಅಮೆರಿಕ ಕಚೇರಿಗಳನ್ನು ತಾತ್ಕಾಲಿಕವಾಗಿ ಮುಚ್ಚಿದೆ. ಕಂಪನಿ ತನ್ನ ವಿಸ್ತಾರವಾದ ಮರುನಿರ್ಮಾಣದ ಅಂಗವಾಗಿ, ಉದ್ಯೋಗಿಗಳನ್ನು ವಜಾ ಮಾಡುತ್ತಿದೆ. ಹೀಗಾಗಿ, ಕಚೇರಿಗಳನ್ನು ಮುಚ್ಚಿದೆ ಎಂದು ವಾಲ್‌ಸ್ಟ್ರೀಟ್ ಜರ್ನಲ್ ವರದಿ ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.
ಈ ಬಗ್ಗೆ ಅಮೆರಿಕದ ಉದ್ಯೋಗಿಗಳಿಗೆ ಕಂಪನಿ ಇ–ಮೇಲ್ ರವಾನಿಸಿದ್ದು, ಸೋಮವಾರದಿಂದ ಮನೆಯಿಂದಲೇ ಕೆಲಸ ಮಾಡುವಂತೆ ಸೂಚನೆ ನೀಡಿದೆ. ವರ್ಚ್ಯುವಲ್ ಆಗಿಯೇ ಉದ್ಯೋಗಿಗಳ ವಜಾ ಬಗ್ಗೆ ನಿರ್ಧಾರ ಕೈಗೊಳ್ಳಬಹುದು ಎನ್ನುವ ಉದ್ದೇಶದಿಂದ ವರ್ಕ್ ಫ್ರಂ ಹೋಮ್ ನೀಡಲಾಗಿದೆ. ಆದರೆ ಉದ್ಯೋಗಿಗಳ ವಜಾ ಪ್ರಕ್ರಿಯೆ ಯಾವ ರೀತಿ ಇರಲಿದೆ ಎನ್ನುವುದರ ಬಗ್ಗೆ ಮಾಹಿತಿ ಇಲ್ಲ.
‘ಏಪ್ರಿಲ್ 3 ರಿಂದ ಆರಂಭವಾಗುವ ವಾರದಲ್ಲಿ, ಸಂಸ್ಥೆಯ ಸಿಬ್ಬಂದಿಗಳ ಪಾತ್ರಗಳ ಬಗ್ಗೆ ತೆಗೆದುಕೊಳ್ಳಲಾಗಿರುವ ಪ್ರಮುಖ ನಿರ್ಧಾರ ಮಾಡಲಾಗುವುದು‘ ಕಂಪನಿ ಉದ್ಯೋಗಿಗಳಿಗೆ ಕಳುಹಿಸಿರುವ ಮೇಲ್‌ನಲ್ಲಿ ಹೇಳಲಾಗಿದೆ.
ಇದರ ಜತೆಗೆ ಈಗಾಗಲೇ ನಿಗದಿಯಾಗಿರುವ ಮುಖತಃ ಸಭೆಗಳನ್ನು ರದ್ದು ಮಾಡಬೇಕು ಎಂದು ಸೂಚಿಸಿದೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…