ಚಿಕ್ಕಬಳ್ಳಾಪುರ : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 27ರಂದು ಸರಕಾರಿ ವೈದ್ಯಕೀಯ ಕಾಲೇಜು ಉದ್ಘಾಟನೆಗೆ ಆಗಮಿಸುತ್ತಿದ್ದಾರೆ. ಜೊತೆಗೆ ಕೇಂದ್ರ ಆರೋಗ್ಯ ಸಚಿವರು, ಕಂದಾಯ ಸಚಿವರು ಮತ್ತು ವಸತಿ ಸಚಿವರು ಭಾಗಿಯಾಗಲಿದ್ದಾರೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.ತಾಲೂಕಿನ ಗುಂತಪ್ಪನಹಳ್ಳಿಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮುಖಂಡ ವೆಂಕಟೇಶ್ ಮತ್ತು ಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಸುಧಾಕರ್, ಕೋಲಾರ, ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಈ ವರೆಗೂ ಸರಕಾರಿ ವೈದ್ಯಕೀಯ ಕಾಲೇಜುಗಳು ಇಲ್ಲ. ಆದರೆ 16 ವರ್ಷಗಳ ಹಿಂದೆ ರಚನೆಯಾದ ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಿಗೆ ಬಿಜೆಪಿ ಸರಕಾರ ವೈದ್ಯಕೀಯ ಕಾಲೇಜು ಮಂಜೂರು ಮಾಡಿದೆ ಎಂದು ಹೇಳಿದರು.
ಮೀಸಲಾತಿ ಹೆಚ್ಚಳ : ಬಿಜೆಪಿ ಸರಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೀಸಲಾತಿ ಹೆಚ್ಚಳ ಮಾಡಿದೆ. ಊರಿನ ಕ್ಷೇಮ ಮತ್ತು ಅಭಿವೃದ್ಧಿಗಾಗಿ ಎಲ್ಲರೂ ಒಂದಾಗಬೇಕು. ಹಳೇ ಬೇರು, ಹೊಸ ಚಿಗುರು ಎಂಬಂತೆ ಹಳಬರು, ಹೊಸಬರು ಎಂಬ ಯಾವುದೇ ಬೇಧ ಭಾರತೀಯ ಜನತಾ ಪಕ್ಷದಲ್ಲಿಲ್ಲ. ಇದಕ್ಕೆ ಸಂಬಂಧಿಸಿದ ಒಂದು ಸಭೆಯನ್ನು ಕರೆದು ಎಲ್ಲರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಲಾಗುವುದು. ಇದರಿಂದ ಈ ಬಾರಿಯ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಹೆಚ್ಚು ಮತ ಪಡೆಯಲು ಸಹಕಾರಿಯಾಗಲಿದೆ ಎಂದು ಡಾ.ಕೆ.ಸುಧಾಕರ್ ಮಾಹಿತಿ ಹಂಚಿಕೊಂಡಿದ್ದಾರೆ.
ಉಚಿತ ನಿವೇಶನ ಹಕ್ಕುಪತ್ರ : ಬಡವರಿಗೆ ನಿವೇಶನಗಳನ್ನು ಹಂಚಿಕೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಆದರೆ ಕೆಲವರು ಜಮೀನು ಎಲ್ಲಿ ಗುರುತಿಸಲಾಗಿದೆ ಎಂದು ಕೇಳುತ್ತಿದ್ದಾರೆ. ಮಾರ್ಚ್ 27ರಂದು ಹನ್ನೆರಡೂವರೆ ಸಾವಿರ ಮಂದಿಗೆ ಉಚಿತ ನಿವೇಶನ ಹಕ್ಕುಪತ್ರ ವಿತರಿಸಲಾಗುತ್ತಿದೆ. ಚಕ್ಕುಬಂದಿ ಸಮೇತ ಹಕ್ಕುಪತ್ರಗಳನ್ನು ವಿತರಿಸಲಾಗುತ್ತದೆ ಪರಿಶೀಲಿಸಿಕೊಳ್ಳಲಿ ಎಂದು ವಿರೋಧಿಸಿದವರಿಗೆ ಟಾಂಗ್ ಕೊಟ್ಟಿದ್ದಾರೆ.
ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…
ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…
ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…
ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…