BREAKING NEWS

ಚಿಕ್ಕಬಳ್ಳಾಪುರದಲ್ಲಿ ಮಾ.27ಕ್ಕೆ ವೈದ್ಯಕೀಯ ಕಾಲೇಜು ಉದ್ಘಾಟನೆ : ಸಚಿವ ಕೆ.ಸುಧಾಕರ್

ಚಿಕ್ಕಬಳ್ಳಾಪುರ‌ : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 27ರಂದು ಸರಕಾರಿ ವೈದ್ಯಕೀಯ ಕಾಲೇಜು ಉದ್ಘಾಟನೆಗೆ ಆಗಮಿಸುತ್ತಿದ್ದಾರೆ. ಜೊತೆಗೆ ಕೇಂದ್ರ ಆರೋಗ್ಯ ಸಚಿವರು, ಕಂದಾಯ ಸಚಿವರು ಮತ್ತು ವಸತಿ ಸಚಿವರು ಭಾಗಿಯಾಗಲಿದ್ದಾರೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.ತಾಲೂಕಿನ ಗುಂತಪ್ಪನಹಳ್ಳಿಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮುಖಂಡ ವೆಂಕಟೇಶ್ ಮತ್ತು ಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಸುಧಾಕರ್, ಕೋಲಾರ, ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ‌ ಈ ವರೆಗೂ ಸರಕಾರಿ ವೈದ್ಯಕೀಯ ಕಾಲೇಜುಗಳು ಇಲ್ಲ. ಆದರೆ 16 ವರ್ಷಗಳ ಹಿಂದೆ ರಚನೆಯಾದ ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಿಗೆ ಬಿಜೆಪಿ ಸರಕಾರ ವೈದ್ಯಕೀಯ ಕಾಲೇಜು ಮಂಜೂರು ಮಾಡಿದೆ ಎಂದು ಹೇಳಿದರು.

ಮೀಸಲಾತಿ ಹೆಚ್ಚಳ : ಬಿಜೆಪಿ ಸರಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೀಸಲಾತಿ ಹೆಚ್ಚಳ ಮಾಡಿದೆ. ಊರಿನ ಕ್ಷೇಮ ಮತ್ತು ಅಭಿವೃದ್ಧಿಗಾಗಿ ಎಲ್ಲರೂ ಒಂದಾಗಬೇಕು. ಹಳೇ ಬೇರು, ಹೊಸ ಚಿಗುರು ಎಂಬಂತೆ ಹಳಬರು, ಹೊಸಬರು ಎಂಬ ಯಾವುದೇ ಬೇಧ ಭಾರತೀಯ ಜನತಾ ಪಕ್ಷದಲ್ಲಿಲ್ಲ. ಇದಕ್ಕೆ ಸಂಬಂಧಿಸಿದ ಒಂದು ಸಭೆಯನ್ನು ಕರೆದು ಎಲ್ಲರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಲಾಗುವುದು. ಇದರಿಂದ ಈ ಬಾರಿಯ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಹೆಚ್ಚು ಮತ ಪಡೆಯಲು ಸಹಕಾರಿಯಾಗಲಿದೆ ಎಂದು ಡಾ.ಕೆ.ಸುಧಾಕರ್‌ ಮಾಹಿತಿ ಹಂಚಿಕೊಂಡಿದ್ದಾರೆ.

ಉಚಿತ ನಿವೇಶನ ಹಕ್ಕುಪತ್ರ : ಬಡವರಿಗೆ ನಿವೇಶನಗಳನ್ನು ಹಂಚಿಕೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಆದರೆ ಕೆಲವರು ಜಮೀನು ಎಲ್ಲಿ ಗುರುತಿಸಲಾಗಿದೆ ಎಂದು ಕೇಳುತ್ತಿದ್ದಾರೆ. ಮಾರ್ಚ್ 27ರಂದು ಹನ್ನೆರಡೂವರೆ ಸಾವಿರ ಮಂದಿಗೆ ಉಚಿತ ನಿವೇಶನ ಹಕ್ಕುಪತ್ರ ವಿತರಿಸಲಾಗುತ್ತಿದೆ. ಚಕ್ಕುಬಂದಿ ಸಮೇತ ಹಕ್ಕುಪತ್ರಗಳನ್ನು ವಿತರಿಸಲಾಗುತ್ತದೆ ಪರಿಶೀಲಿಸಿಕೊಳ್ಳಲಿ ಎಂದು ವಿರೋಧಿಸಿದವರಿಗೆ ಟಾಂಗ್ ಕೊಟ್ಟಿದ್ದಾರೆ.

lokesh

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

7 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

8 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

11 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

12 hours ago