BREAKING NEWS

ಬಜೆಟ್‌ನಲ್ಲಿ ಮೇಕೆದಾಟು ಯೋಜನೆ ಪ್ರಸ್ತಾಪ ಕೆಟ್ಟ ಯೋಜನೆಯಾಗಿದೆ: ನಟ ಚೇತನ್‌

ಬೆಂಗಳೂರು: ಕಾವೇರಿ ನೀರಿನ ವಿಚಾರಕ್ಕೆ ತಮಿಳುನಾಡಿನೊಂದಿಗೆ ನಡೆಯುವ ಮುಸುಕಿನ ಗುದ್ದಾಟ ಇಂದು ನಿನ್ನೆಯದಲ್ಲ. ಕಳೆದ ಹಲವು ದಶಕಗಳಿಂದಲೇ ನಡೆಯುತ್ತಲೇ ಬಂದಿದೆ. ಆದರೆ, ಈವರೆಗೂ ತಾರ್ತಿಕ ಅಂತ್ಯ ಮಾತ್ರ ಕಂಡಿಲ್ಲ. ಈ ನಡುವೆ ರಾಜ್ಯದಲ್ಲಿನ ಕಾಂಗ್ರೆಸ್‌ ಸರ್ಕಾರ ಮೇಕೆದಾಟು ಯೋಜನೆಯನ್ನು ಜಾರಿಗೆ ತಂದೇ ತರ್ತೀವಿ ಅನ್ನೋ ನಿರ್ಧಾರಕ್ಕೆ ಬಂದಿದೆ. ಅದಕ್ಕಾಗಿ ಇಂದು (ಜುಲೈ 7) ಮಂಡಣೆಯಾದ ಬಜೆಟ್‌ನಲ್ಲಿ ಮೇಕೆದಾಟು ಯೋಜನೆ ಸಲುವಾಗಿಯೇ ಸಾಕಷ್ಟು ಅನುದಾನವನ್ನೂ ನಿಗದಿಪಡಿಸಿದೆ.

ಈ ಯೋಜನೆ ಒಂದು ವೇಳೆ ಸಾಕಾರಗೊಂಡರೆ, ಮೇಕೆದಾಟುವಿನಿಂದ 90 ಕಿ. ಮೀ ದೂರವಿರುವ ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ದಾಹ ನೀಗಲಿದೆ. ಇದೀಗ ಈ ಯೋಜನೆಯ ಅನುಷ್ಠಾನಕ್ಕೆ ಹೊಸ ಸರ್ಕಾರದ ಈ ಅವಧಿಯಲ್ಲಿ ಬಜೆಟ್‌ ಮೂಲಕ ಸಿಎಂ ಸಿದ್ದರಾಮಯ್ಯ ಅಡಿಗಲ್ಲು ಹಾಕಿದ್ದಾರೆ . ಈ ಬಗ್ಗೆ ಪರ ವಿರೋಧ ಚರ್ಚೆಗಳೂ ಮುನ್ನೆಲೆಗೆ ಬರುತ್ತಿವೆ. ಇದೀಗ ನಟ, ಸಾಮಾಜಿಕ ಕಾರ್ಯಕರ್ತ ಚೇತನ್‌ ಅಹಿಂಸಾ ಸಹ ಪ್ರತಿಕ್ರಿಯೆ ನೀಡಿದ್ದಾರೆ.

ಇದೊಂದು ಕೆಟ್ಟ ಯೋಜನೆ:  ರಾಜಕೀಯ ಸೇರಿ ಹಲವು ವಿಚಾರಗಳ ಬಗ್ಗೆ ಸದಾ ತಮ್ಮ ಹೇಳಿಕೆಯನ್ನು ದಾಖಲಿಸುವ ನಟ ಚೇತನ್‌ ಅಹಿಂಸಾ, ಮೇಕೆದಾಟು ಯೋಜನೆಗೆ ಈ ಸಲದ ಬಜೆಟ್‌ನಲ್ಲಿ 1000 ಕೋಟಿ ಅನುದಾನವನ್ನು ಕಾಂಗ್ರೆಸ್‌ ಸರ್ಕಾರ ಮೀಸಲಿಟ್ಟಿದೆ. ಹೀಗೆ ಮೀಸಿಲಿಟ್ಟಿದ್ದೇ ತಡ, “ಈ ಮೇಕೆದಾಟು ಯೋಜನೆಯೇ ಒಂದು ಕೆಟ್ಟ ಯೋಜನೆ, ಇದರಿಂದ ಅನುಕೂಲಕ್ಕಿಂತ ಅನಾನುಕೂಲವೇ ಅಧಿಕ ಎಂದು ಚೇತನ್‌, ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ.

ಚೇತನ್‌ ಪೋಸ್ಟ್‌: “ಮೇಕೆದಾಟು ಯೋಜನೆಗೆ ಅನುಮತಿ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಇದೊಂದು ಕೆಟ್ಟ ಯೋಜನೆ. ವಿಪರ್ಯಾಸವೆಂದರೆ, ‘ಪರಿಸರ’ ಮತ್ತು ‘ಪ್ರವಾಹ ನಿರ್ವಹಣೆ’ಯೇ ನಮ್ಮ ಸರ್ಕಾರವು ಜಯಿಸಲು ಪ್ರಯತ್ನಿಸುತ್ತಿರುವ ಮುಖ್ಯ ಸವಾಲುಗಳು. ಮೇಕೆದಾಟು ಅಣೆಕಟ್ಟು ಪರಿಸರವನ್ನು ನಾಶಪಡಿಸುತ್ತದೆ. ಬೆಂಗಳೂರಿನ ಬಳಿಯ ಹಳ್ಳಿಗಳಲ್ಲಿ ಇದರಿಂದ ಪ್ರವಾಹ ಸಂಭವಿಸುತ್ತದೆ” ಎಂದು ಹೇಳಿಕೊಂಡಿದ್ದಾರೆ.

andolanait

Recent Posts

ದಶಕದಿಂದ ಕಾದಿದ್ದ ವಿದ್ಯಾರ್ಥಿಗಳ ವನವಾಸಕ್ಕೆ ಮುಕ್ತಿ!

ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…

3 mins ago

ಎಚ್.ಡಿ.ಕೋಟೆ ಪೊಲೀಸ್ ಕ್ಯಾಂಟೀನ್ ಬಂದ್

ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ  ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…

7 mins ago

300 ಸಿಎ ನಿವೇಶನಗಳ ಹಂಚಿಕೆಗೆ ಎಂಡಿಎ ನಿರ್ಧಾರ

ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ  ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…

12 mins ago

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

9 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

11 hours ago