ಬೆಂಗಳೂರು : ಕರ್ನಾಟಕದಲ್ಲಿ ನಕಲಿ ನೋಟುಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಟ್ಟು 100 ರೂಪಾಯಿ ಮುಖಬೆಲೆಯ 30 ನಕಲಿ ನೋಟುಗಳು ಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳಲ್ಲಿ 4 ಎಫ್ಐಆರ್ಗಳು ದಾಖಲಾಗಿವೆ. ಉಡುಪಿ , ಮಣಿಪಾಲ , ಹುಬ್ಬಳ್ಳಿ ಹಾಗು ಮಲ್ಲೇಶ್ವರ ಬ್ರಾಂಚ್ನ ಬ್ಯಾಂಕ್ ಗಳಲ್ಲಿ ನಕಲಿ ನೋಟು ಪತ್ತೆಯಾಗಿವೆ. ಆರ್ಬಿಐಗೆ ರಿಮೀಟ್ ಮಾಡುವ ಸಂದರ್ಭದಲ್ಲಿ ಈ ನಕಲಿ ನೋಟುಗಳು ಬೆಳಕಿಗೆ ಬಂದಿವೆ.
ಆರ್ ಬಿ ಐ ಮ್ಯಾನೇಜರ್ ಆನಂದ್ ಅವರು ಬ್ಯಾಂಕ್ ಆಫ್ ಬರೋಡಾ , ಕೆನರಾ, ಯುಬಿಐ ಬ್ಯಾಂಕ್ ಮ್ಯಾನೇಜರ್ ಮೇಲೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಬ್ಯಾಂಕ್ ಮ್ಯಾನೇಜರ್ ಗಳನ್ನೇ ಆರೋಪಿಗಳನ್ನಾಗಿ ಮಾಡಿದ್ದಾರೆ. ಈ ಸಂಬಂಧ ಪೊಲೀಸರು ನಕಲಿ ನೋಟಿನ ಜಾಲದ ಹಿಂದೆ ಬಿದ್ದಿದ್ದಾರೆ.