ಬೆಂಗಳೂರು : ಎರಡೂವರೆ ವರ್ಷದ ಬಳಿಕ ಸಚಿವ ಸ್ಥಾನ ತ್ಯಾಗ ಮಾಡಿ ಬೇರೆಯವರಿಗೆ ಅವಕಾಶ ಬಿಟ್ಟುಕೊಡಲು ಮಾನಸಿಕವಾಗಿ ನಾನು ಸಿದ್ದನಿದ್ದೇನೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಕಾಂಗ್ರೆಸ್ ಸರ್ವಸದಸ್ಯರ ಸಭೆಯಲ್ಲಿ ನೀಡಿದ ಹೇಳಿಕೆಗೆ ತಾವು ಬದ್ದವಾಗಿರುವುದಾಗಿ ಪುನರುಚ್ಚರಿಸಿದರು.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಪ್ರತಿಯೊಬ್ಬರು ಕಷ್ಟಪಟ್ಟು ಕೆಲಸ ಮಾಡಿದ್ದಾರೆ. 135 ಜನ ಗೆದ್ದಿದ್ದೇವೆ. ಸಂಪುಟದಲ್ಲಿ ಅವಕಾಶ ಇರುವುದು 34 ಮಂದಿಗೆ ಮಾತ್ರ. ಹೀಗಾಗಿ ಎರಡೂವರೆ ವರ್ಷದ ಬಳಿಕ ನಾವು ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.
ಮೊದಲ ಅವಧಿಯಲ್ಲಿ ಸಚಿವರು ಹಾಗೂ ನಿಗಮಮಂಡಳಿ ಅಧ್ಯಕ್ಷರಾಗಿದ್ದವರು 2ನೇ ಅವಯಲ್ಲಿ ಬೇರೆಯವರಿಗೆ ಅವಕಾಶ ಮಾಡಿಕೊಟ್ಟರೆ ಎಲ್ಲರಿಗೂ ಸಮಾಧಾನಪಡಿಸಿದಂತಾಗುತ್ತದೆ. ನಾನು ಮಾನಸಿಕವಾಗಿ ಸಿದ್ದವಾಗಿದ್ದೆ ಎಂದು ಹೇಳಿದ್ದೇನೆ ಎಂದರು.
ಲೋಕಸಭೆ ಚುನಾವಣೆಯಲ್ಲಿ ಯಾರನ್ನು ಕಣಕ್ಕಿಳಿಸಬೇಕು ಎಂಬುದರ ಕುರಿತು ಹೈಕಮಾಂಡ್ ನಿರ್ಧರಿಸುತ್ತದೆ. ಸಚಿವರಷ್ಟೇ ಅಲ್ಲ ಪಕ್ಷದ ಜಿಲ್ಲಾಧ್ಯಕ್ಷರು, ಬಹಳಷ್ಟು ಹಿರಿಯ ನಾಯಕರು ಸ್ಪರ್ಧೆ ಮಾಡುವ ಸಾಮಥ್ರ್ಯ ಹೊಂದಿದ್ದಾರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಹೈಕಮಾಂಡ್ ಲೆಕ್ಕಾಚಾರದೊಂದಿಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…