ಬೆಂಗಳೂರು: ರೈತರ ಕಷ್ಟ ಕಾರ್ಪಣ್ಯಗಳನ್ನು ಮನಗಂಡು ಆ ದೃಷ್ಟಿಯಿಂದ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಂದಿನ ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ನಾನು ಮೂಲತಃ ಒಬ್ಬ ರೈತನಾಗಿ ನನಗೆ ಹೈನುಗಾರಿಕೆ ರೈತರ ಕಷ್ಟಗಳು ಅರ್ಥವಾಗುತ್ತಿದೆ. ಹಾಲಿನ ಬೆಲೆಯನ್ನು ಲೀಟರ್ ಗೆ 5 ರೂಪಾಯಿ ಏರಿಕೆ ಮಾಡಬೇಕೆಂದು ಬೇಡಿಕೆ ಬಂದಿತ್ತು. ಕೊನೆಗೆ ಮುಖ್ಯಮಂತ್ರಿಗಳು ಮಾತುಕತೆ ನಡೆಸಿ 3 ರೂಪಾಯಿ ಏರಿಕೆ ಮಾಡಲು ನಿರ್ಧಾರ ಕೈಗೊಂಡರು. ಈ ಏರಿಕೆ ಹಣ ನಿಜವಾಗಿಯೂ ರೈತರಿಗೆ ತಲುಪಬೇಕು ಎಂದರು.
3 ರೂಪಾಯಿ ಹೆಚ್ಚಳ ಮಾಡಿದರೆ ಯಾರಿಗೂ ಏನೂ ಸಮಸ್ಯೆಯಾಗುವುದಿಲ್ಲ. ಬಿಜೆಪಿಯವರು ರಾಜಕೀಯದ ಹೇಳಿಕೆ ನೀಡುತ್ತಿದ್ದಾರೆ. ಅವರು ಇರೋದೆ ಟೀಕೆ ಮಾಡಲು ಎಂದರು.
ಇಡೀ ದೇಶದಲ್ಲಿ ನಮ್ಮ ರಾಜ್ಯದಲ್ಲಿ ಮಾತ್ರ ರೈತರು ಹಾಲಿಗೆ ಇಷ್ಟೊಂದು ಕಡಿಮೆ ಹಣ ಪಡೆಯುತ್ತಿದ್ದಾರೆ. ಬೇರೆ ರಾಜ್ಯಗಳಲ್ಲಿ ಹಾಲಿಗೆ ಇದಕ್ಕಿಂತ ದರ ಅಧಿಕವಾಗಿದೆ. 3 ರೂಪಾಯಿ ನೇರವಾಗಿ ರೈತರಿಗೆ ಹೋಗುತ್ತದೆ. ರೈತರಿಗೆ ಸಹಾಯ ಮಾಡಬೇಕೆಂಬುದೇ ನಮ್ಮ ಉದ್ದೇಶ ಎಂದರು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…