BREAKING NEWS

ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ: ಕಾರು ಚಾಲಕ ವಶಕ್ಕೆ

ಬೆಂಗಳೂರು : ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಅವರ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾರು ಚಾಲಕನನ್ನು ಸುಬ್ರಮಣ್ಯಪುರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

ಐದು ವರ್ಷಗಳಿಂದ ಪ್ರತಿಮಾ ಅವರ ಕಾರು ಚಾಲಕನಾಗಿದ್ದ ಕಿರಣ್‍ನನ್ನು ಚಾಮರಾಜನಗರ ಜಿಲ್ಲೆಯಲ್ಲಿ ವಶಕ್ಕೆ ಪಡೆದು ನಗರಕ್ಕೆ ಕರೆ ತಂದಿದ್ದಾರೆ. ಗುತ್ತಿಗೆ ಆಧಾರದಲ್ಲಿ ಕಳೆದ ಐದು ವರ್ಷಗಳಿಂದ ಕಿರಣ್ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಇವರ ತಂದೆ ಸುರೇಶ್ ಸಹ ಇದೇ ಇಲಾಖೆಯಲ್ಲಿ ಕಾರು ಚಾಲಕರಾಗಿದ್ದಾರೆ.

ಕೆಲ ವಿಚಾರದಲ್ಲಿ ಪ್ರತಿಮಾ ಹಾಗೂ ಕಿರಣ್ ನಡುವೆ ಭಿನ್ನಾಭಿಪ್ರಾಯ ಇದ್ದುದರಿಂದ ಹತ್ತು ದಿನಗಳ ಹಿಂದೆಯಷ್ಟೇ ಕಿರಣ್‍ನನ್ನು ಕೆಲಸದಿಂದ ತೆಗೆದು ಹಾಕಿ ಬೇರೆ ಚಾಲಕ ಚೇತನ್‍ನನ್ನು ನಿಯೋಜಿಸಿಕೊಂಡಿದ್ದರು. ಇದೇ ಕಾರಣಕ್ಕೆ ಕಿರಣ್ ಮಹಿಳಾ ಅಧಿಕಾರಿ ಪ್ರತಿಮಾ ಅವರ ಮೇಲೆ ದ್ವೇಷ ಸಾಧಿಸಿ ಈತನೇ ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿ ಆತನ ಹುಡುಕಾಟ ನಡೆಸುತ್ತಿದ್ದಾಗ ಕಿರಣ್ ಮೊಬೈಲ್ ಸ್ವಿಚ್‍ಆಫ್ ಮಾಡಿಕೊಂಡು ಚಾಮರಾಜನಗರ ಜಿಲ್ಲೆಯಲ್ಲಿ ತಲೆಮರೆಸಿಕೊಂಡಿರುವ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದರು.
ಖಚಿತ ಮಾಹಿತಿ ಮೇರೆಗೆ ಪೊಲೀಸರು ಚಾಮರಾಜನಗರ ಜಿಲ್ಲೆಗೆ ತೆರಳಿ ಕಿರಣ್‍ನನ್ನು ವಶಕ್ಕೆ ಪಡೆದು ನಗರಕ್ಕೆ ಕರೆ ತಂದು ತೀವ್ರ ವಿಚಾರಣೆಗೊಳಪಡಿಸಿ ಹಲವು ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ.

ಹಿನ್ನೆಲೆ: ಮೊನ್ನೆ ಸಂಜೆ ಪ್ರತಿಮಾ ಅವರು ಕೆಲಸ ಮುಗಿಸಿಕೊಂಡು ಇಲಾಖೆ ಕಾರಿನಲ್ಲಿ ದೊಡ್ಡಕಲ್ಲಸಂದ್ರದ ಗೋಕುಲ ಅಪಾರ್ಟ್‍ಮೆಂಟ್ ಪಕ್ಕದ ತಮ್ಮ ಮನೆಗೆ ಡ್ರಾಪ್ ಪಡೆದ ಕೆಲವೇ ನಿಮಿಷದಲ್ಲಿ ಅವರ ಕೊಲೆ ನಡೆದು ಹೋಗಿತ್ತು.

ಪ್ರತಿಮಾ ಅವರ ಕುತ್ತಿಗೆಗೆ ಹಗ್ಗದಿಂದ ಬಿಗಿದು ಬಳಿಕ ಚಾಕುವಿನಿಂದ ಕತ್ತು ಇರಿದು ಭೀಕರವಾಗಿ ಕೊಲೆ ಮಾಡಲಾಗಿತ್ತು. ಪ್ರತಿಮಾ ಅವರ ಅಣ್ಣ, ಬಿಬಿಎಂಪಿ ಗುತ್ತಿಗೆದಾರರಾಗಿರುವ ಪ್ರತೀಶ್ ಅವರು ಸಹೋದರಿಯ ಮೊಬೈಲ್‍ಗೆ ಮೊನ್ನೆ ರಾತ್ರಿ ಕರೆ ಮಾಡಿದಾಗ ಸ್ವೀಕರಿಸಿಲ್ಲ. ಎರಡು-ಮೂರು ಬಾರಿ ಕರೆ ಮಾಡಿದರೂ ಸ್ವೀಕರಿಸದಿದ್ದಾಗ ಬೆಳಗ್ಗೆ ಹೋಗಿ ವಿಚಾರಿಸೋಣ ಎಂದು ಸುಮ್ಮನಾಗಿದ್ದಾರೆ.

ನಿನ್ನೆ ಬೆಳಗ್ಗೆ ಸಹೋದರಿ ಪ್ರತಿಮಾ ಅವರ ಮನೆಗೆ ಅಣ್ಣ ಪ್ರತೀಶ್ ಬಂದು ನೋಡಿದಾಗಲೇ ಸಹೋದರಿ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ತನಿಖೆಗಾಗಿ ರಚಿಸಲಾಗಿದ್ದ ಮೂರು ತಂಡಗಳು ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ. ವೈಯಕ್ತಿಕ ಜೀವನ, ವೃತ್ತಿ ಜೀವನ, ಹಣಕಾಸು ಈ ಮೂರು ಆಯಾಮಗಳಲ್ಲಿ ತನಿಖೆ ಕೈಗೊಂಡಿರುವ ಪೆÇಲೀಸರು ಹೆಚ್ಚಿನ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.

andolanait

Recent Posts

ಮಂಜಿನ ನಗರಿಯಲ್ಲಿ ಮೈ ಕೊರೆಯುವ ಚಳಿ

ಹೆಚ್ಚುತ್ತಿರುವ ಶೀತ ವಾತಾವರಣ; ಸದ್ಯಕ್ಕಿಲ್ಲ ಮಳೆಯ ಆತಂಕ  ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದ್ದು, ಫೆಬ್ರವರಿವರೆಗೆ ಇದೇ…

16 mins ago

ಮಲ್ಲಯ್ಯನಪುರದಲ್ಲಿ ನಿರಂತರವಾಗಿ ಕಾಡಾನೆಗಳ ಹಾವಳಿ

ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…

4 hours ago

ಸಣ್ಣ ಕಾಲುವೆಗಳನ್ನು ಮುಚ್ಚಿ ಒತ್ತುವರಿ: ಆರೋಪ

ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…

4 hours ago

‘ಲಾ-ನಿನಾ’ ಚಳಿ: ಜನರ ಆರೋಗ್ಯದ ಮೇಲೆ ದುಷ್ಪರಿಣಾಮ

ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…

4 hours ago

ಶಾಮನೂರು ಶಿವಶಂಕರಪ್ಪ-ಕಪಿಲಾ ತೀರದ ನಡುವೆ ಇತ್ತು ಅವಿನಾಭಾವ ಸಂಬಂಧ!

ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…

4 hours ago