ಸಚಿವ ಗೋವಿಂದ ಕಾರಜೋಳ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಬೆಂಗಳೂರು: ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಇಂದು ನಡೆದಿದೆ.

ನೆಲಮಂಗಲದ ಕುಲುವನಹಳ್ಳಿ ಬಳಿ ಸಚಿವ ಗೋವಿಂದ ಕಾರಜೋಳ ಅವರ ಕಾರು ಅಪಘಾತಕ್ಕೀಡಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವರ ಕಾರು ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬೈಕ್‌ ಸವಾರನಿಗೆ ಗುದ್ದಿದ ಪರಿಣಾಮ ಬೈಕ್‌ ಸವಾರನ ಕಾಲು ಮುರಿತಕ್ಕೆ ಒಳಗಾಗಿದೆ ಎನ್ನಲಾಗಿದೆ.

ಸಚಿವ ಗೋವಿಂದ ಕಾರಜೋಳ ಅವರು ತುಮಕೂರಿನಿಂದ ಬೆಂಗಳೂರಿಗೆ ಕಡೆಗೆ ತೆರಳುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ ಈ ಕುರಿತು ನೆಲಮಂಗಲ ಟ್ರಾಫಿಕ್ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

× Chat with us