BREAKING NEWS

ರಾಜ್ಯಾದ್ಯಂತ ‘ಪೆಹಲಾ ಓಟ್’ ಅಭಿಯಾನಕ್ಕೆ ಸಚಿವ ಕೃಷ್ಣ ಭೈರೇಗೌಡ ಚಾಲನೆ

ಬೆಂಗಳೂರು : ‘2024ನೆ ಸಾಲಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಸಮೂಹವನ್ನು ಸೆಳೆಯಲು ರಾಜ್ಯಾದ್ಯಂತ ‘ಪೆಹಲಾ ಓಟ್’(ಮೊದಲ ಮತ) ಅಭಿಯಾನಕ್ಕೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಚಾಲನೆ ನೀಡಿದರು.

ಶುಕ್ರವಾರ ಸಹಕಾರ ನಗರದಲ್ಲಿರುವ ತಮ್ಮ ಕಚೇರಿಯಲ್ಲಿ ರಾಜ್ಯದಲ್ಲಿ ಮೊದಲ ಮತದಾನ ಅಭಿಯಾನದ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್.ರಕ್ಷಾ ರಾಮಯ್ಯ ಸಮ್ಮುಖದಲ್ಲಿ ಅವರು ಪ್ರಚಾರ ವಾಹನಗಳಿಗೆ ಹಸಿರು ನಿಶಾನೆ ತೋರಿದರು. 18 ರಿಂದ 23 ವಯಸ್ಸಿನ ಮೊದಲ ಬಾರಿಗೆ ಲೋಕಸಭೆಯಲ್ಲಿ ಮತದಾನ ಮಾಡುತ್ತಿರುವವರನ್ನು ಸೆಳೆಯಲು ಈ ಅಭಿಯಾನ ಆಯೋಜಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಎಂ.ಎಸ್.ರಕ್ಷಾ ರಾಮಯ್ಯ, ಯುವ ಸಮೂಹ ದೇಶದ ಯುವ ಶಕ್ತಿಯಾಗಿದ್ದು, ಮೊದಲ ಮತ ಅಭಿಯಾನ ಯುವ ಜನಾಂಗದ ಆಂದೋಲನವಾಗಲಿದೆ. ಅಭಿಯಾನದಲ್ಲಿ ಸಂವಾದ, ತಂತ್ರಜ್ಞಾನ ಆಧಾರಿತ ಪ್ರಚಾರ, ಕ್ಯೂ.ಆರ್.ಕೋಡ್ ಮೂಲಕ ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದರು.

ಸರಕು ಸಾಗಾಣೆ ವಾಹನಗಳಲ್ಲಿ ಎಲ್.ಇ.ಡಿ ವ್ಯವಸ್ಥೆ, ಶಾಲಾ ಕಾಲೇಜುಗಳು, ಟ್ಯೂಷನ್ ತಾಣಗಳು, ಬಸ್ ನಿಲ್ದಾಣಗಳು, ಮಾಲ್ ಗಳಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಯೋಜಿಸಿದ್ದ ಯುವ ಮತ ಅಭಿಯಾನಕ್ಕೆ ಅಭೂಪೂರ್ವ ಸ್ಪಂದನೆ ದೊರೆತಿದ್ದು, ಕಾಂಗ್ರೆಸ್ ಪಕ್ಷ ಶೇ.42ರಷ್ಟು ಯುವ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿತ್ತು ಎಂದು ಅವರು ತಿಳಿಸಿದರು.

ಬಿಜೆಪಿಯನ್ನು ಹಿಂದಿಕ್ಕಿ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು. ಈ ಸಫಲತೆಯ ನಂತರ ಇದೀಗ ಪೆಹಲಾ ಓಟ್ ಅಭಿಯಾನ ಆರಂಭಿಸಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವವರನ್ನು ಸೆಳೆಯುವ ಸವಾಲು ನಮ್ಮ ಮುಂದಿದ್ದು, ನಮಗೆ ಉತ್ತಮ ಬೆಂಬಲ ದೊರೆಯುವ ನಿರೀಕ್ಷೆಯಿದೆ. ಪ್ರಚಾರ ವಾಹನಗಳು ರಾಜ್ಯಾದ್ಯಂತ ಸಂಚರಿಸಲಿವೆ. ಮತದಾನದ ಮಹತ್ವದ ಬಗ್ಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಅರಿವು ಮೂಡಿಸಲಿದ್ದಾರೆ ಎಂದು ಅವರು ಹೇಳಿದರು.

andolanait

Recent Posts

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

58 mins ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

1 hour ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

1 hour ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

1 hour ago

ಋತುಚಕ್ರದ ರಜೆ : ತನ್ನದೆ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ…!

ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…

1 hour ago

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…

1 hour ago