BREAKING NEWS

ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು

ಮಂಡ್ಯ : ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯ ಸ್ವಾಮಿ ವಿರುದ್ಧ ಲಂಚದ ಆರೋಪ ಕೇಳಿಬಂದಿದೆ. ಸಚಿವರು 6 ರಿಂದ 8 ಲಕ್ಷ ರೂಪಾಯಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಜಿಲ್ಲೆಯ ಏಳು ಸಹಾಯಕ ಕೃಷಿ ಅಧಿಕಾರಿಗಳು ಆರೋಪಿಸಿ, ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಮಂಡ್ಯ, ಮಳ್ಳವಳ್ಳಿ, ಕೆ.ಆರ್. ಪೇಟೆ, ನಾಗಮಂಗಲ, ಮದ್ದೂರು, ಶ್ರೀರಂಗಪಟ್ಟಣ ಮತ್ತು ಪಾಂಡವರ ಕೃಷಿ ಸಹಾಯಕ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದು, ಲಂಚಕ್ಕೆ ಕಡಿವಾಣ ಹಾಕದಿದ್ದರೆ ವಿಷ ಆತ್ಮ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ದೂರಿನ ಜೊತೆಗಿನ ಪತ್ರದಲ್ಲಿ ಹೇಳಿದ್ದಾರೆ.

ಸಚಿವರ ವಿರುದ್ಧದ ದೂರಿನ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಅವರಿಗೆ ಪತ್ರ ಬರೆದಿರುವ ರಾಜ್ಯಪಾಲರು, ಪರಿಶೀಲಿಸುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಮಧ್ಯೆ ದೂರಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಚಲುವರಾಯಸ್ವಾಮಿ, ಇಲಾಖೆ ಕಾರ್ಯದರ್ಶಿಯಿಂದ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

lokesh

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…

19 hours ago

ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು!

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…

19 hours ago

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

20 hours ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

20 hours ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

20 hours ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

21 hours ago