ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯು ಪರೀಕ್ಷೆ ರದ್ದು ತೀರ್ಮಾನ ಇಲ್ಲ: ಸುರೇಶ್‌ ಕುಮಾರ್

ಬೆಂಗಳೂರು: ಕೋವಿಡ್‌ನಿಂದಾಗಿ ಮುಂದೂಡಲಾಗಿರುವ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಪಡಿಸುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಸಚಿವ ಎಸ್.ಸುರೇಶ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ಪರೀಕ್ಷೆ ಕುರಿತು ಕೆಲವು ಮಾಧ್ಯಮಗಳ ಸುದ್ದಿ ಊಹಾಪೋಹವಷ್ಟೆ. ವಿದ್ಯಾರ್ಥಿಗಳ ಭವಿಷ್ಯ ಹಾಗೂ ಸುರಕ್ಷತೆ ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ವಿದ್ಯಾರ್ಥಿಗಳು ಗೊಂದಲಕ್ಕೊಳಗಾಗದೇ ಓದಿನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಕೋವಿಡ್‌ ತೀವ್ರವಾಗಿ ಹರಡುತ್ತಿರುವುದರಿಂದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು.

× Chat with us