ಮೈಸೂರು ಮೇಯರ್‌ ಚುನಾವಣೆ ಸದ್ಯಕ್ಕಿಲ್ಲ: ಸಚಿವ ಎಸ್‌.ಟಿ.ಸೋಮಶೇಖರ್‌

ಮೈಸೂರು: ಮಹಾನಗರ ಪಾಲಿಕೆ ಮೇಯರ್‌ ಚುನಾವಣೆ ಸದ್ಯಕ್ಕೆ ನಡೆಸುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಸ್ಪಷ್ಟಪಡಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಭೀತಿ ಇನ್ನೂ ಮುಗಿದಿಲ್ಲ. ಹೀಗಾಗಿ, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಿಲ್ಲ. ಅದರಂತೆ ಮೈಸೂರು ಮಹಾನಗರಪಾಲಿಕೆ ಮೇಯರ್ ಚುನಾವಣೆ ಕೂಡ ಮುಂದಿನ ಡಿಸೆಂಬರ್‌ವರೆಗೆ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಅಭಿವೃದ್ಧಿ ದೃಷ್ಟಿಯಿಂದ ರಾಜ್ಯದ ಸಹಕಾರ ಕ್ಷೇತ್ರದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆಸಲು ಮಾತ್ರ ತೀರ್ಮಾನಿಸಲಾಗಿದೆ. ಮುಂದಿನ ಜನವರಿ ತಿಂಗಳಿನಲ್ಲಿ ರಾಜ್ಯಾದ್ಯಂತ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಗಳನ್ನು ನಡೆಸಲು ಸರ್ಕಾರ ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.

× Chat with us