ಪಾಸಿಟಿವಿಟಿ ರೇಟ್ ಕಡಿಮೆ ಆದಲ್ಲಿ ವೀಕೆಂಡ್ ಕರ್ಫ್ಯೂ ತೆರವು

ಮಡಿಕೇರಿ: ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆ‌ ಆದಲ್ಲಿ ಮುಂದಿನ ವಾರ ವೀಕೆಂಡ್ ಕರ್ಫ್ಯೂ ತೆರವುಗೊಳಿಸುವ ಸಾಧ್ಯತೆ ಇದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ವೀಕೆಂಡ್ ಕರ್ಫ್ಯೂ ಅಂತ್ಯಗೊಳಿಸುವಂತೆ ವರ್ತಕರು ಒತ್ತಾಯಿಸುತ್ತಿದ್ದು, ಈ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದೆ. ಈಗ ಪಾಸಿಟಿವಿಟಿ ರೇಟ್ ಶೇ.1 ರಷ್ಟಿದ್ದು, ಇದೇ ಮುಂದುವರಿದಲ್ಲಿ ಆದಷ್ಟು ಶೀಘ್ರ ವೀಕೆಂಡ್ ಕರ್ಫ್ಯೂ ತೆರವಾಗಲಿದೆ ಎಂದರು.

ಇನ್ನು ಖಾತೆ ಹಂಚಿಕೆ ಅಸಮಾಧಾನದ ಬಗ್ಗೆ ಮಾತನಾಡಿದ ಸೋಮಶೇಖರ್, ಮುಖ್ಯಮಂತ್ರಿಗಳು ಸಮರ್ಥರಿದ್ದು, ಗೊಂದಲಗಳನ್ನು ನಿಭಾಯಿಸುತ್ತಾರೆ. ಆದರೆ ಸದ್ಯ ಸರ್ಕಾರದಲ್ಲಿ ಅಂತಹ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದರು.

× Chat with us