ಕೇರಳ ಗಡಿಯಲ್ಲಿ ಕೋವಿಡ್‌ ನಿಯಂತ್ರಣ ಕ್ರಮಗಳನ್ನು ಪರಿಶೀಲಿಸಿದ ಸಚಿವ ಎಸ್‌ಟಿಎಸ್‌

ಮೈಸೂರು: ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಕರ್ನಾಟಕ -ಕೇರಳ ಗಡಿ ಪ್ರದೇಶ ಬಾವಲಿ ಚೆಕ್ ಪೋಸ್ಟ್‌ಗೆ ಬುಧವಾರ ಖುದ್ದು ಭೇಟಿ ನೀಡಿ ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ಪರಿಶೀಲಿಸಿದರು.

ಕೋವಿಡ್ ನಿಯಂತ್ರಣ ಕ್ರಮ ಪರಿಶೀಲಿಸಿದ ಉಸ್ತುವಾರಿ ಸಚಿವ ಎಸ್‌.ಟಿ‌.ಸೋಮಶೇಖರ್​ಕೇರಳದಲ್ಲಿ ಕೋವಿಡ್ ಹೆಚ್ಚಾಗಿರುವ ಹಿನ್ನೆಲೆ ಗಡಿ ಪ್ರವೇಶಿಸುವ ಎಲ್ಲರೂ ಆರ್​ಟಿಪಿ‌ಸಿಆರ್ ಪರೀಕ್ಷೆ ವರದಿ ನೆಗಿಟಿವ್ ಇರುವುದನ್ನು ತರಬೇಕು ಎಂಬುದನ್ನು ಕಡ್ಡಾಯ ಮಾಡಲಾಗಿದೆ.

ವರದಿ ಇಲ್ಲದೆ ಬರುವವರನ್ನು ವಾಪಸ್ ಕಳುಹಿಸಲಾಗುತ್ತಿದೆ ಎಂದು ಹೇಳಿದರು. ಕೋವಿಡ್ ಹೆಚ್ಚಾಗಿರುವ ಹಿನ್ನೆಲೆ ಸಹಜವಾಗಿಯೇ ವಾಹನಗಳ ಸಂಖ್ಯೆ ಕಡಿಮೆಯಾಗಿದೆ.ಸುಮಾರು 120 ರಿಂದ 130 ವಾಹನಗಳು ಮಾತ್ರ ಈಗ ಬರುತ್ತಿವೆ. ಎಲ್ಲಾ ವಾಹನಗಳಲ್ಲಿರುವ ಪ್ರಯಾಣಿಕರ ಕೋವಿಡ್ ವರದಿ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.

ಕೋವಿಡ್ ಪರೀಕ್ಷೆ ಮಾಡಿಸದೆಯೂ ಬರುವ ಪ್ರಯಾಣಿಕರಿಗೆ ಪರೀಕ್ಷೆ ಮಾಡಲು ಕೇರಳ ಸರ್ಕಾರ ಗಡಿಯಲ್ಲಿ ಸ್ಯಾಂಪಲ್ ಸಂಗ್ರಹ ಕೇಂದ್ರವನ್ನು ಮಂಗಳವಾರದಿಂದ ತೆರೆದಿದೆ.ನಮ್ಮಲ್ಲೂ ಆ ರೀತಿ ಸ್ಯಾಂಪಲ್ ಸಂಗ್ರಹ ಕೇಂದ್ರ ತೆರೆಯಲು ಚರ್ಚಿಸಿ ಕ್ರಮವಹಿಸಲಾಗುವುದು ಎಂದರು. ಕರ್ನಾಟಕದ ರೈತರು ಬೆಳೆದ ತರಕಾರಿ ಹೆಚ್ಚಾಗಿ ಈ ಗಡಿ ಮೂಲಕ ಕೇರಳಕ್ಕೆ ಪೂರೈಕೆಯಾಗುತ್ತದೆ. ನಮ್ಮ ರೈತರಿಗೆ ತೊಂದರೆಯಾಗದಂತೆ ಕ್ರಮವಹಿಸಿದ್ದೇವೆ. ಸಾವು-ನೋವಿನ ಸಂದರ್ಭದಲ್ಲಿ ತುರ್ತಾಗಿ ಪ್ರಯಾಣಿಸಬೇಕಾದವರಿಗೂ ಸಹ ತೊಂದರೆಯಾಗದಂತೆ ಪ್ರಯಾಣಕ್ಕೆ ಸೂಕ್ತ ಅವಕಾಶ ಮಾಡಲಾಗುತ್ತಿದೆ ಎಂದರು.

× Chat with us