BREAKING NEWS

ಸಚಿವರಾದ ಸತೀಶ್ ಜಾರಕಿಹೊಳಿ – ಲಕ್ಷ್ಮೀ ಹೆಬ್ಬಾಳ್ಕರ್ : ಅದ್ಧೂರಿ ಸ್ವಾಗತಕ್ಕೆ ಬೆಳಗಾವಿ ಸಜ್ಜು

ಬೆಳಗಾವಿ : ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡಿರುವ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅದ್ದೂರಿಯಾಗಿ ಸ್ವಾಗತ ಕೋರಲು ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಸಿದ್ಧತೆ ನಡೆಸುತ್ತಿದ್ದಾರೆ.

5ನೇ ಬಾರಿ ಕರ್ನಾಟಕದ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ಸತೀಶ್ ಜಾರಕಿಹೊಳಿ ಸದ್ಯ ರಾಜ್ಯ ಸರ್ಕಾರದ ಪವರ್ ಫುಲ್ ನಾಯಕರಾಗಿ ಹೊರಹೊಮ್ಮಿದ್ದಾರೆ. ಅಲ್ಲದೆ, ಅತ್ತ ಬೆಂಗಳೂರಿನಲ್ಲಿ ಸತೀಶ್ ಅವರು ಮಂತ್ರಿ ಸ್ಥಾನ ಸ್ವೀಕರಿಸುತ್ತಿದ್ದಂತೆ ಇತ್ತ ಬೆಳಗಾವಿಯಲ್ಲಿ ಅವರ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಮೇ.20 ರಂದು ಸತೀಶ್ ಅವರು ಹಾಗೂ ಮೇ.27 ರಂದು ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಂಪುಟ ದರ್ಜೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಇಬ್ಬರೂ ನೂತನ ಸಚಿವರಾದ ನಂತರ ಮೊದಲ ಬಾರಿಗೆ ಬೆಳಗಾವಿಗೆ ಭೇಟಿ ನೀಡುತ್ತಿದ್ದಾರೆ. ಇಂದು ಸಂಜೆ 4 ಗಂಟೆಗೆ ಇಬ್ಬರೂ ನಾಯಕರು ಬೆಳಗಾವಿ ವಿಮಾನ ನಿಲ್ದಾಣ ತಲುಪಲಿದ್ದಾರೆ. ಒಟ್ಟಾಗಿ ಆಗಮಿಸುತ್ತಿರುವ ಸಚಿವರನ್ನು ಸ್ವಾಗತಿಸಲು ಇಡೀ ಬೆಳಗಾವಿ ಮಹಾನಗರ ಸಜ್ಜಾಗಿದ್ದು, ವಿಮಾನ ನಿಲ್ದಾಣದಿಂದಲೇ ಬೃಹತ್ ರ್ಯಾಲಿ ಮೂಲಕ ನಗರಕ್ಕೆ ಕರೆತರಲು ಕಾರ್ಯಕರ್ತರು ಹಾಗೂ ಅಭಿಮಾನಿಗಳು ನಿರ್ಧರಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಅವರು, ಮೇ 28ರಂದು ಸಂಜೆ 4 ಗಂಟೆಗೆ ಸಚಿವರು, ಶಾಸಕರು ಒಳಗೊಂಡಿರುವ ತೆರೆದ ವಾಹನದ ಬೃಹತ್ ವಿಜಯೋತ್ಸವ ಮೆರವಣಿಗೆ ಕಾಂಗ್ರೆಸ್ ಭವನದಿಂದ ಆರಂಭಗೊಂಡು ಕೊಲ್ಲಾಪುರ ವೃತ್ತ, ಅಂಬೇಡ್ಕರ್ ಉದ್ಯಾನವನದಲ್ಲಿ ಅಂಬೇಡ್ಕರ್ ಪ್ರತಿಮೆಗೆ, ಚನ್ನಮ್ಮ ವೃತ್ತದಲ್ಲಿ ಚನ್ನಮ್ಮ ಪ್ರತಿಮೆಗೆ, ಬೋಗಾರವೇಸ್‌ನಲ್ಲಿ ಸಂಭಾಜಿ ಪ್ರತಿಮೆಗೆ ಮಾರ್ಲಾಪಣೆ ಮಾಡಲಿದ್ದಾರೆ. ಬಳಿಕ ವೀರಸೌಧದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ರೈಲ್ವೆ ಮೂರನೇ ಗೇಟ್ ಮೂಲಕ ಗೋವಾವಸೇಸ್‌ನಲ್ಲಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ತದನಂತರ ಶಿವಾಜಿ ಉದ್ಯಾನವನದ ಮಾರ್ಗವಾಗಿ ಪ್ರವಾಸಿ ಮಂದಿರದಲ್ಲಿದಲ್ಲಿ ಮುಗಿಯಲಿದೆ ಎಂದು ಮಾಹಿತಿ ನೀಡಿದರು.

ಬೆಳಗಾವಿ ಉತ್ತರ, ಗ್ರಾಮೀಣ, ಯಮಕನಮರಡಿ, ಖಾನಾಪುರ ವಿಧಾನಸಭಾ ಕ್ಷೇತ್ರಗಳಿಂದ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಬರಲಿದ್ದಾರೆ. ಸುಮಾರು 5 ಸಾವಿರ ಬೈಕ್ ರ್ಯಾಲಿ ನಡೆಯಲಿದೆ. ಬಳಿಕ ನೂತನ ಸಚಿವರು, ಶಾಸಕರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ. ವಿಜಯೋತ್ಸವ ಮೆರವಣಿಗೆಯಲ್ಲಿ ಬರೋಬ್ಬರಿ 10 ಸಾವಿರ ಜನರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

lokesh

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago